ಮೂಡುಬಿದ್ರೆ ಮೂಲದ ನಿವೃತ್ತ ನ್ಯಾ. ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

12-02-23 02:43 pm       HK News Desk   ದೇಶ - ವಿದೇಶ

ಮಹತ್ವದ ಬೆಳವಣಿಗೆಯಲ್ಲಿ ಕಳೆದ ತಿಂಗಳು ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕೇಂದ್ರ ಸರಕಾರ ನೇಮಕಗೊಳಿಸಿದೆ.

ನವದೆಹಲಿ, ಫೆ.12: ಮಹತ್ವದ ಬೆಳವಣಿಗೆಯಲ್ಲಿ ಕಳೆದ ತಿಂಗಳು ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕೇಂದ್ರ ಸರಕಾರ ನೇಮಕಗೊಳಿಸಿದೆ.

ಎಸ್.ಅಬ್ದುಲ್ ನಜೀರ್ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಬಳಿಯ ಬೆಳುವಾಯಿ ನಿವಾಸಿ.‌ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಪೀಠದ ಸದಸ್ಯರಾಗಿದ್ದ ಅಬ್ದುಲ್ ನಜೀರ್ ಜನವರಿ 14ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು.

ಅಬ್ದುಲ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದ್ದು ಮಂಗಳೂರಿನಲ್ಲಿ ಕಾನೂನು ಪದವಿ ಗಳಿಸಿ ಫೆಬ್ರವರಿ 18, 1983 ರಂದು ವಕೀಲರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್ ಮಾಡಿದ್ದ ಅವರು 2003ರ ಮೇ 12 ರಂದು ಹೈಕೋರ್ಟ್‌ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ಇತ್ತೀಚೆಗೆ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ‌.ವೈ ಚಂದ್ರಚೂಡ್, ನಜೀರ್ ಅವರ ಸರಳತೆಯ ಬಗ್ಗೆ ಪ್ರಸ್ತಾಪಿಸಿ ಕೊಂಡಾಡಿದ್ದರು. ಜಸ್ಟಿಸ್ ನಜೀರ್ 2019ರ ವರೆಗೆ ಪಾಸ್‌ಪೋರ್ಟ್ ಸಹ ಹೊಂದಿರಲಿಲ್ಲ ಮತ್ತು ಕೆಲವು ವಾರಗಳ ಹಿಂದೆಯಷ್ಟೇ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದರು. ಇದು ಅವರ ಸರಳ ಜೀವನಕ್ಕೆ ಸಾಕ್ಷಿ ಎಂದು ಹೇಳಿದ್ದರು.

ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಸೇರಿದಂತೆ 14 ಮಂದಿ ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದೆ. ಬಿಸ್ವ ಭೂಷಣ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನುಸೂಯ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ಮಾಡಲಾಗಿದೆ.

President Droupadi Murmu today notified the appointment of the Supreme Court's retired judge Justice S Abdul Nazeer as the third Governor of Andhra Pradesh. Syed Abdul Nazeer is a former judge of the Supreme Court native of Mangalore and retired on January 4 this year.