ಬ್ರೇಕಿಂಗ್ ನ್ಯೂಸ್
14-02-23 02:52 pm HK News Desk ದೇಶ - ವಿದೇಶ
ನವದೆಹಲಿ, ಫೆ.14 : ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತು ಯುನೈಟಡ್ ಕಿಂಗ್ಡಮ್ನ ರಾಷ್ಟ್ರೀಯ ಪ್ರಸಾರ ಮಾಧ್ಯಮವಾದ ಬಿಬಿಸಿ (ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ತಯಾರಿಸಿದ ಸಾಕ್ಷ್ಯಚಿತ್ರದ ವಿವಾದದ ಬೆನ್ನಲ್ಲೇ ದೆಹಲಿಯ ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ ನಡೆದಿರುವುದು ವರದಿಯಾಗಿದೆ.
ತೆರಿಗೆ ವಂಚನೆ ತನಿಖೆಯ ಭಾಗವಾಗಿ ಶೋಧ ನಡೆಸಲಾಗುತ್ತಿದೆ. ಕಂಪನಿಯ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಅದರ ಭಾರತೀಯ ಬ್ರಾಂಚ್ಗೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕಚೇರಿಯ ಸಿಬ್ಬಂದಿಯನ್ನು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಪಿಎಂ ಮೋದಿ ಕುರಿತು 'ಇಂಡಿಯಾ: ದಿ ಮೋದಿ ಕ್ವಶ್ಚನ್' (India: The Modi Question)ಹೆಸರಿನ ಸಾಕ್ಷ್ಯಚಿತ್ರವೊಂದನ್ನು ಬಿಬಿಸಿ ತಯಾರಿಸಿತ್ತು. ಎರಡು ಭಾಗಗಳಲ್ಲಿ ಮೂಡಿ ಬಂದಿರುವ ಈ ಸಾಕ್ಷ್ಯಚಿತ್ರದಕ್ಕೆ ಸಂಬಂಧಿಸಿದ ಲಿಂಕ್ಗಳನ್ನು, ಯೂಟ್ಯೂಬ್ ವಿಡಿಯೋಗಳನ್ನು ಹಾಗೂ ಟ್ವೀಟ್ಗಳನ್ನು ಭಾರತ ಸರ್ಕಾರ ಬ್ಲಾಕ್ ಮಾಡಿತ್ತು. ಇದನ್ನು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಟೀಕಿಸಿದ್ದವು. ಸರ್ಕಾರದ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಈ ಡಾಕ್ಯುಮೆಂಟರಿಯಲ್ಲಿ 2002ರ ಗುಜರಾತ್ ಗಲಭೆ ವೇಳೆ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ಪಾತ್ರವನ್ನು ತೋರಿಸಲಾಗಿದೆ. ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಪಕ್ಷಪಾತಿ ಧೋರಣೆಯುಳ್ಳ ಅಪಪ್ರಚಾರದ ತುಣಕು ಎಂದು ಕಿಡಿಕಾರಿತ್ತು.
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಖುದ್ದು ಸುಪ್ರೀಂಕೋರ್ಟ್ ಪ್ರಧಾನಿ ಮೋದಿ ಅವರಿಗೆ ಕ್ಲಿನ್ ಚಿಟ್ ನೀಡಿದ್ದು, ಈ ವಿಷಯವನ್ನು ಮತ್ತೆ ಕೆದಕುವುದು ನ್ಯಾಯಾಂಗವನ್ನು ಅವಮಾನಿಸಿದಂತಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಜಾಗತಿಕ ಮಟ್ಟದಲ್ಲಿ ಈ ಸಾಕ್ಷ್ಯಚಿತ್ರ ಚರ್ಚೆಗೆ ಎಡೆಮಾಡಿಕೊಟ್ಟಿದ್ದು, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡ ಪ್ರಧಾನಿ ಮೋದಿಯನ್ನು ಸಮರ್ಥಿಸಿಕೊಂಡಿದ್ದಾರೆ. "ಗುಜರಾತ್ ಗಲಭೆ ಬಗ್ಗೆ ಬ್ರಿಟನ್ ಸರ್ಕಾರದ ನಿಲುವು ಸ್ಪಷ್ಟವಾಗಿದೆ ಮತ್ತು ದೀರ್ಘಕಾಲೀಕವಾಗಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವುದೇ ಕಿರುಕುಳವನ್ನು ಸಹಿಸುವುದಿಲ್ಲ. ಆದರೆ ಪ್ರಧಾನಿ ಮೋದಿ ಅವರ ಪಾತ್ರವನ್ನು ನಾನು ಒಪ್ಪುತ್ತೇನೆ ಎಂದು ನನಗೆ ಅನಿಸುತ್ತಿಲ್ಲ" ಎಂದು ಹೇಳಿದ್ದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್ಯು), ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ದೆಹಲಿ ವಿಶ್ವವಿದ್ಯಾಲಯ, ಹೈದರಾಬಾದ್ ವಿಶ್ವವಿದ್ಯಾಲಯ ಸೇರಿದಂತೆ ದೇಶದ ಅನೇಕ ವಿವಿಗಳು ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾಗಿದ್ದವು. ಆದರೆ ಕೆಲವೆಡೆ ಈ ಯತ್ನವನ್ನು ವಿಫಲಗೊಳಿಸಲಾಗಿತ್ತು.
ಈ ಬಗ್ಗೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿದ್ದು ಅವ್ಯವಹಾರ ಕಂಡುಬಂದಲ್ಲಿ ಐಟಿ ಇಲಾಖೆಯಿಂದ ಕಾಲ ಕಾಲಕ್ಕೆ ಸರ್ವೆ ನಡೆಯುತ್ತದೆ. ಪರಿಶೀಲನೆ ಮುಗಿದ ಬಳಿಕ ಐಟಿ ಇಲಾಖೆಯಿಂದಲೇ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಬಿಬಿಸಿ ಕಚೇರಿ ಮೇಲೆ ನಡೆದಿರುವ ದಾಳಿಯ ಬಗ್ಗೆ ನಾವು ನಿಗಾ ಇಟ್ಟಿದ್ದೇವೆ ಎಂದು ಇಂಗ್ಲೆಂಡ್ ಸರಕಾರದ ಮೂಲಗಳು ತಿಳಿಸಿವೆ.
The Income Tax Department surveyed the Delhi and Mumbai offices of the British Broadcasting Corporation (BBC) on Tuesday. The BBC office in New Delhi is located on KG Marg. The department is looking at documents related to the business operations of the company and those related to its Indian arm, they said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm