ಬ್ರೇಕಿಂಗ್ ನ್ಯೂಸ್
16-02-23 04:42 pm HK News Desk ದೇಶ - ವಿದೇಶ
ನವದೆಹಲಿ, ಫೆ.16: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸತತ ಮೂರನೇ ದಿನವೂ ದೆಹಲಿಯಲ್ಲಿರುವ ಬಿಬಿಸಿ ನ ಕಚೇರಿಯಲ್ಲಿ ‘ಸಮೀಕ್ಷೆ’ಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕನಿಷ್ಠ 10 ಹಿರಿಯ ಉದ್ಯೋಗಿಗಳು ಕಳೆದ ಎರಡು ದಿನಗಳಿಂದ ಮನೆಗೆ ಹೋಗದೇ ರಾತ್ರಿ ಇಡೀ ಕಚೇರಿಯಲ್ಲೇ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಎರಡು ಭಾಗಗಳ ‘ಇಂಡಿಯಾ: ದಿ ಮೋದಿ ಕ್ವಶ್ಚನ್' ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ಬ್ರಿಟನ್‌ನಲ್ಲಿ ಪ್ರಸಾರ ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಈ ಸಮೀಕ್ಷೆ ಹೆಸರಿನ ದಾಳಿ ನಡೆದಿದ್ದು, ಅಧಿಕಾರಿಗಳು ಸಿಬ್ಬಂದಿಗಳಿಂದ ಹಣಕಾಸಿನ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ. ಸುದ್ದಿ ಸಂಸ್ಥೆಯ ದಾಖಲೆಗಳ ಪ್ರತಿಗಳನ್ನೂ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ದಿಲ್ಲಿಯಲ್ಲಿರುವ ಬಿಬಿಸಿ ಕಚೇರಿಯು, ಎಂದಿನಂತೆ ತಮ್ಮ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಾಗಿ ಹೇಳಿದ್ದು, ಅನೇಕ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 11:30ರ ಸುಮಾರಿಗೆ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಗಳಿಗೆ ಭೇಟಿ ನೀಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ಆರಂಭವಾಗಿ 50 ಗಂಟೆಗೂ ಹೆಚ್ಚಿನ ಕಾಲ ಕಳೆದಿದ್ದು, ಇನ್ನೂ ಪರಿಶೀಲನೆ ನಡೆಯುತ್ತಿದೆ.
ಕಾರ್ಯಾಚರಣೆ ಯಾವಾಗ ಮುಗಿಯಲಿದೆ ಎನ್ನುವುದು ಅಲ್ಲಿರುವ ತಂಡಗಳ ನಿರ್ಧಾರದ ಮೇಲೆ ನಿಂತಿದೆ. ಅಧಿಕಾರಿಗಳು ಇನ್ನೂ ಸ್ವಲ್ಪ ಸಮಯದವರೆಗೆ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದರು. ಇದೀಗ ಗುರುವಾರವೂ ಪರಿಶೀಲನೆ ಮುಂದುವರಿದಿದ್ದು, ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.
ಅಂತಾರಾಷ್ಟ್ರೀಯ ತೆರಿಗೆ ಮತ್ತು ಬಹುರಾಷ್ಟ್ರೀಯ ಕಂಪನಿಯ ವಿವಿಧ ಅಂಗ ಸಂಸ್ಥೆಗಳ ನಡುವಿನ ಹಣಕಾಸಿನ ವರ್ಗಾವಣೆಯ ಬಗ್ಗೆ ವಿವರಗಳನ್ನು ಪಡೆದುಕೊಳ್ಳಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಮೀಕ್ಷಾ ತಂಡಗಳು ಹಣಕಾಸಿನ ವಹಿವಾಟು, ಕಂಪನಿಯ ರಚನೆ ಮತ್ತು ಸುದ್ದಿ ಸಂಸ್ಥೆಯ ಇತರ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸಾಕ್ಷ್ಯವನ್ನು ಸಂಗ್ರಹಿಸುವ ಕಾರ್ಯದ ಭಾಗವಾಗಿ ಎಲೆಕ್ಟ್ರಾನಿಕ್ ಸಾಧನಗಳಿಂದ ಡೇಟಾವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಆದಾಯ ತೆರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಂಡನ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸ್ಥೆಯ ವಿರುದ್ಧದ ಐಟಿ ಇಲಾಖೆಯ ಕ್ರಮವನ್ನು ವಿರೋಧ ಪಕ್ಷಗಳು ಖಂಡಿಸಿದ್ದು, ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರಕ್ಕೆ ಪ್ರತಿಕ್ರಿಯೆಯಾಗಿ ಈ ‘ರಾಜಕೀಯ ಸೇಡಿನ ದಾಳಿ’ ನಡೆದಿದೆ ಎಂದು ಬಣ್ಣಿಸಿವೆ. ಇನ್ನೊಂದೆಡೆ ಆಡಳಿತಾರೂಢ ಬಿಜೆಪಿಯು ಬಿಬಿಸಿಯು, ‘ವಿಷಪೂರಿತ ವರದಿ’ ಮಾಡುತ್ತಿದ್ದು, ‘ಅತ್ಯಂತ ಭ್ರಷ್ಟ’ ಸಂಸ್ಥೆ ಎಂದು ಆರೋಪಿಸಿದೆ.
ಈ ಸಮೀಕ್ಷೆ ಬಗ್ಗೆ ಆದಾಯ ತೆರಿಗೆ ಇಲಾಖೆ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿ ಬಿಬಿಸಿ ಹೇಳಿದೆ.
ವಿವಾದಾತ್ಮಕ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಭಾರತದಲ್ಲಿ ಬಿಬಿಸಿಯ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಜಾಗೊಳಿಸಿತ್ತು.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯು ಏಪ್ರಿಲ್‌ನಲ್ಲಿ ನಡೆಯಲಿದೆ. ಜನವರಿ 21ರಂದು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ಯೂಟ್ಯೂಬ್, ಟ್ವಿಟರ್ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳದಂತೆ ಸರಕಾರವು ನಿರ್ಬಂಧ ವಿಧಿಸಿತ್ತು.
The Income Tax survey operations at the BBC offices in Delhi and Mumbai continued for the third day on Thursday. The survey operations began on Tuesday at 11:30 AM as part of probe into alleged tax evasion in the business operations of the British broadcaster in India, reported PTI. The action by the department comes weeks after the London-headquartered media organisation released a two-part documentary titled ‘India: The Modi Question’ which focuses on the alleged role of Prime Minister Narendra Modi and the 2002 Gujarat riots.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm