ಬ್ರೇಕಿಂಗ್ ನ್ಯೂಸ್
22-02-23 02:44 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಭಾರತದ ಭಾರತ ಭೂಭಾಗ ಇರುವ ಟೆಕ್ಟೋನಿಕ್ ಪ್ಲೇಟ್ ಪ್ರತಿ ವರ್ಷ ಸುಮಾರು 5 ಸೆಂಟಿಮೀಟರ್ ಉತ್ತರಕ್ಕೆ ಚಲಿಸುತ್ತಿದೆ. ಇದರಿಂದ ಹಿಮಾಲಯದ ಉದ್ದಕ್ಕೂ ಒತ್ತಡಕ್ಕೆ ಕಾರಣವಾಗುತ್ತಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಭೂಕಂಪಗಳ ಸಾಧ್ಯತೆಯನ್ನು ನಿರಾಕರಿಸುವಂತಿಲ್ಲ ಎಂದು ಭೂವಿಜ್ಞಾನ ತಜ್ಞರು ಎಚ್ಚರಿಸಿದ್ದಾರೆ.
ಹೈದರಾಬಾದ್ ಮೂಲದ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಜಿಆರ್‌ಐ) ಸಂಸ್ಥೆಯ ಮುಖ್ಯ ವಿಜ್ಞಾನಿ ಮತ್ತು ಭೂಕಂಪಶಾಸ್ತ್ರಜ್ಞ ಡಾ.ಎನ್. ಪೂರ್ಣಚಂದ್ರ ರಾವ್ ಎಎನ್‌ಐ ಜೊತೆ ಈ ವಿಚಾರ ಹಂಚಿಕೊಂಡಿದ್ದಾರೆ. ಭೂಮಿಯ ಮೇಲ್ಮೈ ನಿರಂತರ ಚಲನೆಯಲ್ಲಿರುವ ಟೆಕ್ಟೋನಿಕ್ ಪ್ಲೇಟ್‌ಗಳ ಮೇಲೆ ನಿಂತಿದೆ. ಭಾರತ ಉಪಖಂಡ ಇರುವ ಟೆಕ್ಟೋನಿಕ್ ಪ್ಲೇಟ್ ಪ್ರತ್ಯೇಕವಾಗಿದ್ದು ಅದು ಉತ್ತರದತ್ತ ನಿರಂತರ ಘರ್ಷಣೆಯಲ್ಲಿದೆ. ಉತ್ತರದ ಚೀನಾ ಪ್ಲೇಟ್ ಜೊತೆಗಿನ ಘರ್ಷಣೆಯಿಂದಾಗಿ ಹಿಮಾಲಯ ಶ್ರೇಣಿ ಉಂಟಾಗಿದೆ ಎಂಬ ನಂಬಿಕೆಯಿದೆ. ಈಗ ದಕ್ಷಿಣದಲ್ಲಿರುವ ಭಾರತ ಉಪಖಂಡದ ಪ್ಲೇಟ್ ಪ್ರತಿ ವರ್ಷ 5 ಸೆಂಟಿಮೀಟರ್ ಚಲಿಸುತ್ತಿದೆ. ಹಿಮಾಲಯದ ಉದ್ದಕ್ಕೂ ಇದರಿಂದ ಒತ್ತಡ ಸೃಷ್ಟಿಯಾಗುತ್ತಿದೆ ಎಂದವರು ವಿವರಿಸಿದ್ದಾರೆ.
ನಾವು ಉತ್ತರಾಖಂಡದಲ್ಲಿ 18 ಭೂಕಂಪನ ಕೇಂದ್ರಗಳ ಪ್ರಬಲ ಜಾಲವನ್ನು ಹೊಂದಿದ್ದೇವೆ. ಹಿಮಾಚಲ ಮತ್ತು ಉತ್ತರಾಖಂಡ ಸೇರಿ ನೇಪಾಳದ ಪಶ್ಚಿಮ ಭಾಗದ ನಡುವಿನ ಅಂತರದ ಪ್ರದೇಶವು ಯಾವುದೇ ಸಮಯದಲ್ಲಿ ಭೂಕಂಪಗಳಿಗೆ ಕಾರಣವಾಗಬಲ್ಲದು ಎಂದು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ಉತ್ತರಕ್ಕೆ 56 ಕಿಮೀ ದೂರದಲ್ಲಿ ಸೋಮವಾರ ರಾತ್ರಿ 10.38 ಕ್ಕೆ 3.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪನದ ಕೇಂದ್ರವು ಭೂಮಿಯ ಮೇಲ್ಮೈಯಿಂದ 10 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
As per the study and research conducted by scientist of National Geophysical Research Institute (NGRI), Indian tectonic plate is moving about 5 cm every year, leading to accumulation of stress along the Himalayas and increasing the possibility of major seismic events -- earthquakes -- in the coming days.The research stated that Earth's surface comprises various plates that are constantly in motion. The Indian plate is moving about 5 cm every year, resulting in the accumulation of stress along the Himalayas and raising the possibility of major earthquakes.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm