ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.

ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm