ಬ್ರೇಕಿಂಗ್ ನ್ಯೂಸ್
26-02-23 09:51 pm HK News Desk ದೇಶ - ವಿದೇಶ
ನವದೆಹಲಿ, ಫೆ.26: ದೆಹಲಿ ಆಮ್ ಆದ್ಮಿ ಪಕ್ಷದ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಆಗಿರುವ ಮನೀಶ್ ಸಿಸೋಡಿಯಾ ಅವರನ್ನು ಕೊನೆಗೂ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಭಾನುವಾರ ಎಂಟು ಗಂಟೆಗಳ ನಿರಂತರ ವಿಚಾರಣೆಯ ಬಳಿಕ ಸಿಸೋಡಿಯಾ ಬಂಧಿಸಿದ್ದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ವರ್ಷದಿಂದ ದೆಹಲಿಯ ನೂತನ ಲಿಕ್ಕರ್ ಪಾಲಿಸಿ ಮತ್ತು ಅದರಲ್ಲಿ ಆಗಿರುವ ಅವ್ಯವಹಾರದಲ್ಲಿ ಸಿಸೋಡಿಯಾ ಅವರನ್ನು ಆರೋಪಿಯಾಗಿಸಿ ಕೇಂದ್ರೀಯ ತನಿಖಾ ತಂಡಗಳು ತನಿಖೆ ನಡೆಸಿದ್ದವು. ಸಿಸೋಡಿಯಾ ಬಂಧನ ಆಗುತ್ತೆ ಎಂದು ಬಹಳಷ್ಟು ಬಾರಿ ಹೇಳಲಾಗಿದ್ದರೂ, ಬಂಧನ ಮಾತ್ರ ಆಗಿರಲಿಲ್ಲ. ಸಾಕ್ಷ್ಯಾಧಾರಗಳಿದ್ದರೆ ಬಂಧಿಸಿ ಎಂದು ಸಿಸೋಡಿಯಾ ಅವರೇ ನೇರವಾಗಿ ಸವಾಲು ಹಾಕಿದ್ದರು. ಸಿಬಿಐ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಿಸಿದ್ದ ಎಫ್ಐಆರ್ ನಲ್ಲಿ ಸಿಸೋಡಿಯಾ ಹೆಸರನ್ನು ಆರೋಪಿಯಾಗಿ ಉಲ್ಲೇಖ ಮಾಡಿತ್ತು. ಆದರೆ, ನವೆಂಬರ್ ತಿಂಗಳಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಹೆಸರನ್ನು ಉಲ್ಲೇಖ ಮಾಡಿರಲಿಲ್ಲ.
ಸಿಸೋಡಿಯಾ ಬಂಧನ ವಿಚಾರ ತಿಳಿಯುತ್ತಿದ್ದಂತೆ ಆಪ್ ಕಾರ್ಯಕರ್ತರು ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ದೆಹಲಿ ಸಿಎಂ ಕೇಜ್ರಿವಾಲ್ ಪ್ರತಿಕ್ರಿಯಿಸಿ, ನಿರಪರಾಧಿಯನ್ನು ಬಂಧಿಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಅನ್ನುವುದು ಗೊತ್ತಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ಜನರು ಅರ್ಥ ಮಾಡಿಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಬೂಸ್ಟ್ ಸಿಕ್ಕಿದೆ ಎಂದಿದ್ದಾರೆ.
![]()
ಸಿಬಿಐ ನನ್ನನ್ನು ಅರೆಸ್ಟ್ ಮಾಡಲಿ, ಗಲ್ಲಿಗೆ ಹಾಕಲಿ, ನಾವು ಹೆದರುವುದಿಲ್ಲ. ಪ್ರಧಾನಿ ಮೋದಿ, ಕೇಜ್ರಿವಾಲ್ ಬಗ್ಗೆ ಹೆದರಿ ನಕಲಿ ಪ್ರಕರಣದಲ್ಲಿ ನನ್ನನ್ನು ಆರೋಪಿಯಾಗಿಸಿದ್ದಾರೆ. ನನ್ನನ್ನು 7-8 ತಿಂಗಳ ಕಾಲ ಜೈಲಿನಲ್ಲಿಟ್ಟರೂ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ. ಕಳೆದೊಂದು ವರ್ಷದಲ್ಲಿ ದೆಹಲಿ ಆಪ್ ಸರ್ಕಾರದ ಎರಡನೇ ಸಚಿವ ಅರಸ್ಟ್ ಆಗುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನಕ್ಕೀಡಾಗಿದ್ದರು. ಜೈನ್, ಮನೀಶ್ ಸಿಸೋಡಿಯಾ ಅವರ ಹತ್ತಿರದ ಗೆಳೆಯರಾಗಿದ್ದರು.
The CBI on Sunday arrested Delhi deputy chief minister Manish Sisodia in connection with the alleged liquor scam case after interrogating him for 8.5 hours.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm