ಬ್ರೇಕಿಂಗ್ ನ್ಯೂಸ್
23-03-23 10:30 pm HK News Desk ದೇಶ - ವಿದೇಶ
ನವದೆಹಲಿ, ಮಾ.23: ಪ್ರಧಾನಿ ಮೋದಿಯನ್ನು ಅಣಕಿಸುವ ಭರದಲ್ಲಿ ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಇರುವುದೇಕೆ ಎಂದು ಪ್ರಶ್ನೆ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2019ರಲ್ಲಿ ಲೋಕಸಭೆ ಚುನಾವಣೆ ಸಂದರ್ಭ ಮೋದಿ ಹೆಸರೇಳಿ ರಾಹುಲ್ ಗಾಂಧಿ ಅಣಕಿಸಿದ್ದರು. ಈ ಬಗ್ಗೆ ಗುಜರಾತಿನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ತಮ್ಮ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಮಾನನಷ್ಟ ಕೇಸು ದಾಖಲಿಸಿದ್ದರು.
ಮೂರು ವರ್ಷಗಳ ವಿಚಾರಣೆ ಬಳಿಕ ಸೂರತ್ ಕೋರ್ಟ್ ಮಾ.23ರಂದು ತೀರ್ಪು ನೀಡಿದ್ದು, ರಾಹುಲ್ ಗಾಂಧಿಗೆ ಎರಡು ವರ್ಷಗಳ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ. ಕೋರ್ಟ್ ತೀರ್ಪು ನೀಡಿದ ವೇಳೆ ರಾಹುಲ್ ಗಾಂಧಿ ಕೋರ್ಟಿನಲ್ಲಿ ಉಪಸ್ಥಿತರಿದ್ದರು. ಕೋರ್ಟ್ ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನನ್ನ ಧರ್ಮ ಸತ್ಯ ಮತ್ತು ಅಹಿಂಸೆಯ ಮೇಲೆ ನಿಂತಿದೆ. ಸತ್ಯವೇ ದೇವರು, ಅಹಿಂಸೆಯೇ ಧರ್ಮದ ದೇವರನ್ನು ಸಮೀಪಿಸುವ ಸಾಧನ ಎಂದು ಮಹಾತ್ಮ ಗಾಂಧಿಯ ಮಾತುಗಳನ್ನು ಉಲ್ಲೇಖಿಸಿದ್ದಾರೆ. ದೇಶ ಬಿಟ್ಟು ಹೋಗಿರುವ ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ನಿಂದಿಸಲು ಆ ರೀತಿ ಆಡಿದ್ದರು. ಆದರೆ ತಾನಾಡಿದ್ದ ಮಾತೇ ಈಗ ರಾಹುಲ್ ಗೆ ಮುಳುವಾಗಿದೆ.
ರಾಹುಲ್ ಗಾಂಧಿ ಅವರಿಗೆ ಈ ಹಿಂದೆಯೇ ಸುಪ್ರೀಂ ಕೋರ್ಟ್ ತಮ್ಮ ಮಾತಿನ ಬಗ್ಗೆ ನಿಗಾ ಇರಿಸುವಂತೆ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಅವರು ಸುಧಾರಿಸಿಕೊಂಡಿರಲಿಲ್ಲ. ರಾಹುಲ್ ಗಾಂಧಿ ಒಬ್ಬ ಸಂಸದರಾಗಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಮಾತನಾಡುವಾಗ ಗಂಭೀರವಾಗಿರಬೇಕು. ಸಂಸದನಾಗಿ ಸಾರ್ವಜನಿಕ ಪ್ರದೇಶದಲ್ಲಿ ಹೇಳುವ ಮಾತುಗಳು ಹೆಚ್ಚು ಪ್ರಭಾವ ಬೀರುತ್ತದೆ. ಅದು ಅಪರಾಧಕ್ಕೆ ಕಾರಣವಾಗಬಲ್ಲದು ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ನ್ಯಾಯಾಧೀಶರು, ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಗರಿಷ್ಠ ಶಿಕ್ಷೆಯನ್ನೇ ನೀಡಿದ್ದೇನೆ ಎಂದು ಹೇಳಿದ್ದರು.
ಲೋಕಸಭೆ ಸದಸ್ಯತ್ವ ಅನರ್ಹ ಭೀತಿ
ರಾಹುಲ್ ಗಾಂಧಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವುದರಿಂದ ಲೋಕಸಭೆ ಸದಸ್ಯತ್ವ ಕಳಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8(3)ರ ಪ್ರಕಾರ ಜನಪ್ರತಿನಿಧಿಯೊಬ್ಬರು ಕ್ರಿಮಿನಲ್ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರೆ, ಆತನ ಸದಸ್ಯತ್ವ ಅನರ್ಹಗೊಳ್ಳುತ್ತದೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಒಂದ್ವೇಳೆ ರಾಹುಲ್ ಗಾಂಧಿ ಸದಸ್ಯತ್ವದಿಂದ ಅನರ್ಹಗೊಂಡರೆ, ವಯನಾಡ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗುತ್ತದೆ. ಅಲ್ಲದೆ, ರಾಹುಲ್ ಗಾಂಧಿ ಐದು ವರ್ಷಗಳ ಕಾಲ ಚುನಾವಣೆ ಸ್ಪರ್ಧಿಸುವಂತಿಲ್ಲ.
2013ರಲ್ಲಿ ಲಿಲಿ ಥೋಮಸ್ ಮತ್ತು ಭಾರತ ಸರಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಯಾವುದೇ ಜನಪ್ರತಿನಿಧಿ ಎರಡು ವರ್ಷಗಳ ಶಿಕ್ಷೆ ಪ್ರಕಟವಾದ ಕೂಡಲೇ ಆತನ ಸದಸ್ಯತ್ವ ತಕ್ಷಣದಿಂದಲೇ ಅನರ್ಹವಾಗುತ್ತದೆ ಎಂದಿತ್ತು. ಇದರ ಜೊತೆಗೆ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ತನ್ನೆಲ್ಲಾ ಕಾನೂನು ಹೋರಾಟ ಮುಗಿಯುವ ವರೆಗೂ ಸದಸ್ಯತ್ವದಲ್ಲಿ ಮುಂದುವರಿಯಬಹುದು ಎಂಬ ನಿಯಮವನ್ನು ಕೋರ್ಟ್ ಅಸಾಂವಿಧಾನಿಕ ಎಂದು ಹೇಳಿತ್ತು. ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಸಲಹೆಗಾರ ಕಾಂಚನ್ ಗುಪ್ತಾ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರು. ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಜಂ ಖಾನ್ ಎರಡು ವರ್ಷಗಳ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಅದೇ ನಿಯಮ ರಾಹುಲ್ ಗಾಂಧಿಗೂ ಅನ್ವಯವಾಗುತ್ತದೆ ಎಂದಿದ್ದಾರೆ.
The Congress MP was convicted by the court in Gujarat state for 2019 comments about Prime Minister Narendra Modi's surname at an election rally. Mr Gandhi, who was present in court for sentencing, remains out of jail on bail for 30 days and will appeal. His party accused Mr Modi's government of targeting him. General elections are due next year.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm