ಬ್ರೇಕಿಂಗ್ ನ್ಯೂಸ್
29-03-23 12:13 pm HK News Desk ದೇಶ - ವಿದೇಶ
ನವದೆಹಲಿ, ಮಾ.29: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ. ಎಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು ಎಪ್ರಿಲ್ 20ರ ಒಳಗೆ ನಾಮಪತ್ರ ಸಲ್ಲಿಕೆಯಾಗಬೇಕು. 21ರಂದು ನಾಮಪತ್ರ ಪರಿಶೀಲನೆ, 24ರಂದು ನಾಮಪತ್ರ ಹಿಂತೆಗೆಯಲು ದಿನಾಂಕ ಇರಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ್, ಕರ್ನಾಟಕದ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಾದ್ಯಂತ ನೀತಿ ಸಂಹಿತೆಯೂ ಜಾರಿಗೆ ಬರಲಿದೆ.
ಕರ್ನಾಟಕದಲ್ಲಿ 224 ವಿಧಾನಸಭೆ ಕ್ಷೇತ್ರಗಳಿದ್ದು 36 ಕ್ಷೇತ್ರಗಳು ಎಸ್ಸಿ, 15 ಎಸ್ಟಿ ಮೀಸಲಾಗಿದೆ. ಒಟ್ಟು 5 ಕೋಟಿ 31 ಲಕ್ಷ ಮತದಾರರಿದ್ದಾರೆ. 2 ಕೋಟಿ 59 ಲಕ್ಷ ಮಹಿಳಾ ಮತದಾರರಿದ್ದಾರೆ. ಪುರುಷ ಮತದಾರರು 2.63 ಕೋಟಿ ಇದ್ದಾರೆ. 12.15 ಲಕ್ಷ ಮಂದಿ ಯುವಕರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 42,756 ಮಂದಿ ತೃತೀಯ ಲಿಂಗಿ ಮತದಾರರಿದ್ದಾರೆ. 5.55 ಲಕ್ಷ ವಿಕಲ ಚೇತನ ಮತದಾರರಿದ್ದಾರೆ. ಈ ಬಾರಿ 80 ವರ್ಷ ಮೇಲ್ಪಟ್ಟ ಹಿರಿಯ ನಾಕರಿಕರು, ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜೇನುಕುರುಬ ಮತ್ತು ಕಾಡು ಕುರುಬ ಜನರಿಗೆ ಪ್ರತ್ಯೇಕ ಮತಗಟ್ಟೆಗಳನ್ನು ರಚಿಸಲಾಗಿದೆ. ಒಂದೊಂದು ಮತಗಟ್ಟೆಗೆ ಅಂದಾಜು 900 ರಷ್ಟು ಮತದಾರರು ಇರಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 34,219 ಮತ್ತು ನಗರ ಪ್ರದೇಶದಲ್ಲಿ 24,063 ಮತಗಟ್ಟೆ ಇರಲಿದೆ. 1200 ಸೂಕ್ಷ್ಮ ಮತಗಟ್ಟೆಗಳು ಇರಲಿವೆ. ಕಳೆದ ಬಾರಿ ಬೆಂಗಳೂರು ನಗರ ಭಾಗದಲ್ಲಿ ಕಡಿಮೆ ಮತದಾನ ಆಗಿತ್ತು. ಈ ಬಾರಿ ಮತದಾನ ಹೆಚ್ಚಿಸಲು ಪ್ರಯತ್ನ ಮಾಡಿದ್ದೇವೆ. ರಾಜ್ಯದಲ್ಲಿ 240 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಕೆಲಸಕ್ಕಾಗಿ 2400 ವೀಕ್ಷಕರ ನೇಮಕ ಮಾಡಲಾಗಿದೆ. ಹಣಕಾಸು ವಹಿವಾಟುಗಳ ಮೇಲೆ ಕಣ್ಣಿಡುವುದಕ್ಕಾಗಿ ಬ್ಯಾಂಕ್ ಖಾತೆಗಳ ಮೇಲೂ ನಿಗಾ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಬಾರಿ 2018ರಲ್ಲಿ ಮೇ 12ರಂದು ಒಂದೇ ಹಂತದ ಚುನಾವಣೆ ನಡೆದು ಮೇ 18ರಂದು ಫಲಿತಾಂಶ ಘೋಷಣೆಯಾಗಿತ್ತು. ಈ ಬಾರಿಯ ಕರ್ನಾಟಕದ 15ನೇ ವಿಧಾನಸಭೆಯ ಅವಧಿ ಮೇ 24ಕ್ಕೆ ಕೊನೆಯಾಗಲಿದ್ದು ಅದಕ್ಕೂ ಮೊದಲೇ ಸರಕಾರ ರಚನೆಯಾಗಬೇಕಿದೆ.
Karnataka assembly election, Election on May 10 and the counting will be on May 13 says CEC Rajiv Kumar.The Election Commission of India on Wednesday announced the dates of the Karnataka Assembly election.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm