ಬ್ರೇಕಿಂಗ್ ನ್ಯೂಸ್
31-03-23 09:17 am HK News Desk ದೇಶ - ವಿದೇಶ
ಮಧ್ಯಪ್ರದೇಶ: ಇಂದೋರ್ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದು ಸಾವನ್ನಪ್ಪಿರುವ ಅನಂತ ಘಟನೆ ನಡೆದಿದೆ .ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
ಪುರಾತನ ಬಾವಡಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು ಮತ್ತು ಈ ಭಾರವನ್ನು ಹೊರಲು ಸಾಧ್ಯವಾಗದೆ ಅದು ಕುಸಿದಿದೆ ಎಂದು ಪಿಟಿಐ ವರದಿ ತಿಳಿಸಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯು ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದೋರ್ ಪೊಲೀಸ್ ಮತ್ತು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಭಕ್ತರನ್ನು ಸ್ಥಳಾಂತರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ದೇವಾಲಯವನ್ನು ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿದ್ದು, ಇಂದೋರ್ನ ಹಳೆಯ ವಸತಿ ಕಾಲೋನಿಗಳಲ್ಲಿ ಒಂದಾಗಿರುವ ಸ್ನೇಹ್ ನಗರದಲ್ಲಿ ನೆಲೆಗೊಂಡಿದೆ. ನಿವಾಸಿಗಳು ಈ ಹಿಂದೆಯೇ ದೇವಾಲಯದ ಅಭಿವೃದ್ಧಿಗೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅದರಂತೆ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಕ್ರಮ ಕೈಗೊಂಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚೌಹಾಣ್ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
The death toll in Indore temple stepwell collapse has increased to 35 on Friday morning as the search operation to trace persons reported missing after the tragic incident was on. Several people fell into a well as roof of Shri Beleshwar Mahadev Jhulelal Temple caved in during Ram Navami celebration in the Patel Nagar area in Indore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm