ಬ್ರೇಕಿಂಗ್ ನ್ಯೂಸ್
25-10-20 02:06 pm Headline Karnataka News Network ದೇಶ - ವಿದೇಶ
ಕಾಬೂಲ್ , ಅಕ್ಟೋಬರ್ 25 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಕಾಬೂಲಿನ ದಶ್ತ್ ಇ - ಬರ್ಚಿ ಎನ್ನುವ ಶಿಯಾ ಮುಸ್ಲಿಮರು ಹೆಚ್ಚಿರುವ ಪ್ರದೇಶದ ಶಾಲಾ ಆವರಣದಲ್ಲಿ ಬಾಂಬ್ ದಾಳಿ ಘಟನೆ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಬಾಂಬರ್ ವ್ಯಕ್ತಿಯನ್ನು ಒಳಬರದಂತೆ ತಡೆದಿದ್ದು ಇದೇ ವೇಳೆ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಬಾಂಬ್ ದಾಳಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. 57 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಈತನಕ ಯಾವುದೇ ಭಯೋತ್ಪಾದಕ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ಸಂಘಟನೆ ಕೃತ್ಯದಲ್ಲಿ ತನ್ನದೇನು ಪಾತ್ರ ಇಲ್ಲವೆಂದು ಹೇಳಿಕೊಂಡಿದೆ.
2018ರ ಆಗಸ್ಟ್ ನಲ್ಲಿ ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು. ಶಾಲಾ ಆವರಣಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಸ್ಫೋಟಗೊಂಡು 34 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಲ್ಲಿ ಶಿಯಾ, ಸಿಖ್ ಮತ್ತು ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡು ಐಸಿಸ್ ಉಗ್ರರು ದಾಳಿ ನಡೆಸುತ್ತಿದ್ದಾರೆ. ಐಸಿಸ್ ದೃಷ್ಟಿಯಲ್ಲಿ ಶಿಯಾ, ಸಿಖ್, ಹಿಂದು, ಕ್ರೈಸ್ತರು ಕಾಫಿರರು ಆಗಿದ್ದು ಅಫ್ಘಾನಿಸ್ತಾನವನ್ನು ಅನ್ಯಮತೀಯರನ್ನು ಟಾರ್ಗೆಟ್ ಮಾಡಿ ದಾಳಿ ಆರಂಭಿಸಿದೆ. ಹೀಗಾಗಿ ಇಂದಿನ ದಾಳಿಯನ್ನೂ ಐಸಿಸ್ ಉಗ್ರರೇ ನಡೆಸಿರುವ ಸಾಧ್ಯತೆಯಿದೆ.
The death toll from a suicide attack at an educational centre in Kabul has gone up to 24, Afghanistan’s interior ministry said. At least 57 others were wounded in the attack that took place on Saturday, it added.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm