ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm