ಬ್ರೇಕಿಂಗ್ ನ್ಯೂಸ್
11-04-23 01:39 pm HK News Desk ದೇಶ - ವಿದೇಶ
ನವದೆಹಲಿ, ಏ 11: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಾದ ಎನ್ಟಿಎಯು UG 2023 ರ ನೋಂದಣಿ ಕಮ್ ಅಪ್ಲಿಕೇಶನ್ ವಿಂಡೋವನ್ನು ಇಂದು ಪುನಃ ತೆರೆದಿದೆ. ಈ ಹಿಂದೆ ನೀಟ್ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡು, ಅರ್ಜಿ ಸಲ್ಲಿಸಲಾಗದವರು ಅಥವಾ ಇದೇ ಮೊದಲ ಬಾರಿಗೆ ನೊಂದಾಯಿಸಿಕೊಂಡು ಅರ್ಜಿ ಸಲ್ಲಿಸುವವರು ಈ ಅವಕಾಶವನ್ನು ಬಳಸಬಹುದು
ಇಂದಿನಿಂದ ಏಪ್ರಿಲ್ 13ರವರೆಗೆ neet.nta.nic.in ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಏಪ್ರಿಲ್ 13ರ ರಾತ್ರಿ 11:59 ರವರೆಗೆ ಅರ್ಜಿ ಸಲ್ಲಿಕೆ ವಿಂಡೋ ಸಕ್ರಿಯವಾಗಿರುತ್ತದೆ.
ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಮತ್ತು ಇನ್ನು ಮುಂದೆ ಅರ್ಜಿ ಕರೆಕ್ಷನ್ಗೆ ಅವಕಾಶ ನೀಡುವುದಿಲ್ಲ ಎಂದು ಎನ್ಟಿಎ ತಿಳಿಸಿದೆ.
ವಿವಿಧ ಕಾರಣಗಳಿಂದ ಈ ಹಿಂದೆ ಅರ್ಜಿ ಸಲ್ಲಿಕೆ ಸಾಧ್ಯವಾಗದೆ ಇರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ವಿಂಡೋ ಮತ್ತೆ ತೆರೆಯಲಾಗಿದೆ ಎಂದು ಎನ್ಟಿಎ ತಿಳಿಸಿದೆ.
NEET UG 2023ಗೆ ಅರ್ಜಿ ಸಲ್ಲಿಕೆ ಹೇಗೆ?
ಮೇ 7, 2023ರಂದು NEET UG 2023 ಪರೀಕ್ಷೆ ನಡೆಯಲಿದೆ. ಅಡ್ಮಿಟ್ ಕಾರ್ಡ್ ಮತ್ತು ಪರೀಕ್ಷಾ ನಗರ ಮಾಹಿತಿ ಸ್ಲಿಪ್ ಸದ್ಯದಲ್ಲಿಯೇ ಪ್ರಕಟವಾಗಲಿದೆ.
ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಚಂದ್ ಬಿಂದ್ ಅವರು, ವೈದ್ಯಕೀಯ ಪದವಿ ಹಂತದ ಪ್ರವೇಶಕ್ಕಾಗಿ ಆಯೋಜಿಸಲಾಗುವ ನೀಟ್ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದೇ ಎಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಭಾರತಿ ಪ್ರಬನ್ ಪವಾರ್, ನೀಟ್ ಯುಜಿ ಪರೀಕ್ಷೆ ಕುರಿತು ಪ್ರಮುಖ ನವೀಕರಣವನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದರು.
ಕೇಂದ್ರ ಸರ್ಕಾರವು ಪದವಿಪೂರ್ವ ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ನಡೆಸುವ ಯಾವುದೇ ಯೋಜನೆಯನ್ನು ಪ್ರಸ್ತುತ ಹೊಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಭಾರತಿ ಪ್ರಬನ್ ಪವಾರ್ ಸಂಸತ್ತಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ವರ್ಷದಲ್ಲಿ ಎರಡು ಬಾರಿ ನೆಟ್ ಯುಜಿ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ತಿಳಿಸಿವೆ ಎಂದು ಕೇಂದ್ರ ಸಚಿವರು ಹೇಳಿದರು.
The National Testing Agency (NTA) is reopening the registration window for the National Eligibility and Entrance Examination for Undergraduates (NEET-UG) 2023. The registration window will remain open till April 13, 2023.The National Testing Agency (NTA) is reopening the registration window for the National Eligibility and Entrance Examination for Undergraduates (NEET-UG) 2023. The registration window will remain open till April 13, 2023.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm