ಬ್ರೇಕಿಂಗ್ ನ್ಯೂಸ್
15-04-23 01:49 pm HK News Desk ದೇಶ - ವಿದೇಶ
ಮಹಾರಾಷ್ಟ, ಎ.15: ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
40 ಜನರಿದ್ದ ಖಾಸಗಿ ಬಸ್ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ ಪುಣೆ ಮುಂಬೈ ಹೆದ್ದಾರಿಯ ಖೋಪೋಲಿಯಲ್ಲಿ ವೇಗವಾಗಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಇದರಿಂದ ಬಸ್ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ 12 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ಪಡೆ ಸಿಬ್ಬಂದಿ ಬಸ್ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದರು. ಬಸ್ ಬಿದ್ದ ರಭಸದ ಆಧಾರದ ಮೇಲೆ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಸಾಂಪ್ರದಾಯಿಕ ಸಂಗೀತ ತಂಡವೊಂದರ ಸದಸ್ಯರನ್ನು ಈ ಖಾಸಗಿ ಬಸ್ ಪುಣೆಯಿಂದ ಮುಂಬಯಿಗೆ ಕರೆದೊಯ್ಯುತ್ತಿತ್ತು. ಬೆಳಗಿನ ಜಾವ 4.50ರ ಸುಮಾರಿಗೆ ಹೆದ್ದಾರಿಯಲ್ಲಿನ ಶಿಂಗ್ರೋಬಾ ದೇವಸ್ಥಾನದ ಸಮೀಪ ಕಂದರವೊಂದಕ್ಕೆ ಬಸ್ ಉರುಳಿಬಿದ್ದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಬಸ್ನಲ್ಲಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು.
"ಮುಂಬಯಿಯ ಗೋರೆಗಾಂವ್ನ 'ಬಜಿ ಪ್ರಭು ವಾದಕ್ ಗ್ರೂಪ್' ಎಂಬ ಸಂಗೀತ ತಂಡದ ಸದಸ್ಯರನ್ನು ಬಸ್ ಕರೆದೊಯ್ಯುತ್ತಿತ್ತು. ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಈ ತಂಡವು ಗೋರೆಗಾಂವ್ಗೆ ಮರಳಿ ಬರುತ್ತಿತ್ತು. ಶನಿವಾರ ರಾತ್ರಿ 1 ಗಂಟೆಗೆ ಈ ತಂಡ ಸ್ಥಳದಿಂದ ಹೊರಟಿತ್ತು.
"ಮಹಾರಾಷ್ಟ್ರದ ರಾಯಗಡದಲ್ಲಿ ನಡೆದ ರಸ್ತೆ ಅಪಘಾತ ದುರದೃಷ್ಟಕರ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ. ಮೃತರ ಕುಟುಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
At least 12 youths were killed, while 27 others were injured after the bus they were travelling in, fell into a gorge on the old Mumbai-Pune highway in Maharashtra’s Raigad district on Saturday. according to police, the private bus carrying members of a traditional music troupe was en-route from Pune to Mumbai. The accident occurred around 4.50 am under the Khopoli police station limits, where the bus fell into the gorge near Shingroba temple.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm