ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm