ಬ್ರೇಕಿಂಗ್ ನ್ಯೂಸ್
20-04-23 01:01 pm HK News Desk ದೇಶ - ವಿದೇಶ
ಸೂರತ್, ಎ.20: 'ಮೋದಿ ಸರ್ನೇಮ್' ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕರಾಹುಲ್ ಗಾಂಧಿಅವರಿಗೆ ಸೂರತ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ರಾಬಿನ್ ಮೊಗೇರಾ ಅವರು, ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಇದರಿಂದ ಕಾಂಗ್ರೆಸ್ ನಾಯಕ ಸಂಸತ್ ಸದಸ್ಯತ್ವ ಅನರ್ಹತೆಯಿಂದ ಬಚಾವಾಗುವುದು ಸಾಧ್ಯವಾಗಿಲ್ಲ.
2019ರ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತು ಮಾಡುವಂತೆ ಹಾಗೂ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸೂರತ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಎಲ್ಲ ಕಳ್ಳರ ಹೆಸರಲ್ಲಿಯೂ ಮೋದಿ ಸರ್ನೇಮ್ ಇದೆ" ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23ರಂದು ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿತ್ತು. ಇದು ಕ್ರಿಮಿನಲ್ ಮಾನಹಾನಿ ಪ್ರಕರಣವಾಗಿದ್ದು, ಎರಡು ವರ್ಷ ಶಿಕ್ಷೆಗೆ ಒಳಗಾಗಿದ್ದರಿಂದ ತಕ್ಷಣವೇ ಸ್ವಯಂಚಾಲಿತವಾಗಿ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಂಡಿತ್ತು.
ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಏಪ್ರಿಲ್ 13ರಂದು ಮೇಲ್ಮನವಿ ಸಲ್ಲಿಸಿದ್ದರು. ಅವರ ಶಿಕ್ಷೆ ಮುಂದುವರಿಯಲಿದೆಯೇ ಅಥವಾ ಅದಕ್ಕೆ ತಡೆ ಬೀಳಲಿದೆಯೇ ಎನ್ನುವುದು ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿತವಾಗಿತ್ತು. ಆದರೆ ಅಲ್ಲಿ ಅವರ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಅವರ ಸಂಸತ್ ಸದಸ್ಯತ್ವ ಅನರ್ಹತೆ ಮುಂದುವರಿಯಲಿದೆ.
ತಮ್ಮ ಸಂಸದ ಸ್ಥಾನಮಾನದ ಬಗ್ಗೆ ವಿಪರೀತ ಪ್ರಭಾವಕ್ಕೆ ಒಳಗಾದ ವಿಚಾರಣಾ ನ್ಯಾಯಾಲಯವು ತಮ್ಮನ್ನು ಕಠಿಣವಾಗಿ ನಡೆಸಿಕೊಂಡಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದರು. ರಾಹುಲ್ ಗಾಂಧಿ ಅವರ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಮೋದಿ ಸರ್ನೇಮ್ ಹೊಂದಿರುವ ಎಲ್ಲ ವ್ಯಕ್ತಿಗಳನ್ನೂ ಅವಮಾನಿಸಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಹದಿರಾಶ್ ವರ್ಮಾ ತೀರ್ಪು ಪ್ರಕಟಿಸುವಾಗ ಹೇಳಿದ್ದರು.
ನನ್ನ ಭಾಷಣವನ್ನು ಸಂದರ್ಭದಿಂದ ಹೊರಗೆ ಎಳೆಯದೆ ಇದ್ದರೆ, ಅದು ಮಾನಿಹಾನಕರವಾಗಿಲ್ಲ. ಅದು ಮಾನಹಾನಿಕರವನ್ನಾಗಿ ಮಾಡಲು ಅಥವಾ ಹಾಗೆ ಕಾಣಿಸಲು ಭೂತಕನ್ನಡಿಯಡಿ ನೋಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕಾತ್ಮಕವಾಗಿ ಮಾತನಾಡುವ ಧೈರ್ಯ ಪ್ರದರ್ಶಿಸಿದ್ದಕ್ಕೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ" ಎಂದು ರಾಹುಲ್ ಗಾಂಧಿ ವಾದಿಸಿದ್ದರು.
A Surat sessions court on Thursday rejected an appeal filed by Congress leader Rahul Gandhi, seeking a stay on his conviction in a criminal defamation case that resulted in his disqualification from the Lok Sabha.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm