ಬ್ರೇಕಿಂಗ್ ನ್ಯೂಸ್
21-04-23 02:59 pm HK News Desk ದೇಶ - ವಿದೇಶ
ಶ್ರೀನಗರ, ಎ.21: ಜಮ್ಮು ಮತ್ತು ಕಾಶ್ಮೀರದ ರಜೌರಿ ವಲಯದ ಪೂಂಚ್ ಸಮೀಪ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿಉಗ್ರ ಕೃತ್ಯ ನಿಗ್ರಹಕ್ಕೆ ನಿಯೋಜನೆಗೊಂಡಿದ್ದ ರಾಷ್ಟ್ರೀಯ ರೈಫಲ್ಸ್ ಪಡೆಗೆ ಸೇರಿದ ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.
ಘಟನೆಯಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಮೀಪದ ರಜೌರಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ ಸೇನಾ ವಾಹನಗಳು ಭಿಂಬರ್‌ಗಲಿಯಿಂದ ಸಾಂಗಿಯೋಟ್‌ಗೆ ತೆರಳುತ್ತಿದ್ದ ವೇಳೆ ಭಾಟಾ ಧುರಿಯಾ ಬಳಿ ಅಪರಿಚಿತ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಭಾರೀ ಮಳೆಯಿಂದ ಉಂಟಾಗಿದ್ದ ಮಂದ ಬೆಳಕಿನ ಲಾಭ ಪಡೆದ ಉಗ್ರರು ಸೇನಾ ವಾಹನದ ಮೇಲೆ ನಡೆಸಿದ ಗ್ರೆನೇಡ್ ದಾಳಿಯಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಭವಿಸಿದ ತಕ್ಷಣವೇ ಕಾರ್ಯ ಪ್ರವೃತ್ತರಾದ ಸೇನಾ ಪಡೆಗಳು, ದಾಳಿ ನಡೆಸಿದ ಉಗ್ರರಿಗೆ ರಜೌರಿ ವಲಯದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿವೆ. ಇತ್ತ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ರೈಫಲ್ಸ್ ಪಡೆಯ ಮುಖ್ಯಸ್ಥರು ಪರಿಶೀಲನೆ ನಡೆಸಿದರು. ಪ್ರಾಥಮಿಕ ವರದಿಗಳ ಪ್ರಕಾರ, ಸಿಡಿಲು ಬಡಿದು ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದೇ ಹೇಳಲಾಗಿತ್ತು. ಬಳಿಕ ಸಂಶಯಾಸ್ಪದ ಸ್ಫೋಟದಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ವರದಿಯಾಗಿತ್ತು. ಆ ನಂತರ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಇದು ಉಗ್ರರ ಕೃತ್ಯ ಎಂದು ತಿಳಿದು ಬಂದಿದೆ.
ಸ್ಥಳೀಯ ಪೊಲೀಸರ ಪ್ರಕಾರ ಪಾಕಿಸ್ತಾನ ಪೋಷಿತ ಲಷ್ಕರೆ ತಯ್ಬಾ ಸಂಘಟನೆ ಬೆಂಬಲಿತ 'ಪೀಪಲ್ಸ್ ಆಫ್ ಆಂಟಿ ಪ್ಯಾಸಿಸ್ಟ್ ಫ್ರಂಟ್' ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ದುರ್ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ''ಇದೊಂದು ದುರಾದೃಷ್ಟಕರ ಘಟನೆ. ಮೃತ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ, ಆವರ ಕುಟುಂಬಸ್ಥರಿಗೆ ದುಃಖ ಬರಿಸುವ ಶಕ್ತಿ ಆ ಭಗವಂತ ನೀಡಲಿ,'' ಎಂದು ಸಂತಾಪ ಸೂಚಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ20 ಸಮ್ಮೇಳ ;
ಮುಂದಿನ ತಿಂಗಳು ಜಿ20 ಸಮ್ಮೇಳನದ ಪ್ರವಾಸೋದ್ಯಮ ಕಾರ್ಯಕಾರಿ ಗುಂಪು ಸಭೆ ಶ್ರೀನಗರದಲ್ಲಿ ನಡೆಯಬೇಕಿದೆ. ಈ ಹೊತ್ತಲ್ಲೇ ಉಗ್ರರ ಕೃತ್ಯ ನಡೆದಿರುವುದು ಭದ್ರತೆಯ ಆತಂಕ ಹೆಚ್ಚಿಸಿದೆ. ಕಳೆದ ತಿಂಗಳಷ್ಟೇ ಗೃಹ ಸಚಿವ ಅಮಿತ್ ಶಾ, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕೇಂದ್ರಾಡಳಿತ ಪ್ರದೇಶದಲ್ಲಿನ ಭದ್ರತೆ ಕುರಿತಂತೆ ಪರಿಶೀಲನೆ ನಡೆಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಸೇನಾ ವಾಹನದ ಮೇಲೆ ಭಯೋಧಿತ್ಪಾದಕರು ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.
Security forces have launched a massive search operation in the dense forests of the Bata-Doriya area after a terrorist attack in Jammu and Kashmir's Poonch killed five Indian Army personnel and injured one, officials said on Friday. The entire area has been cordoned off while drones and sniffer dogs are being used to sniff out the terrorists that might be hiding in the area, they said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm