ಬ್ರೇಕಿಂಗ್ ನ್ಯೂಸ್
27-10-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ಕಾಯ್ದೆ ರದ್ದಾದ ಬಳಿಕ ಬದಲಾವಣೆಯ ಗಾಳಿ ಬೀಸಲು ಆರಂಭಿಸಿದೆ. ಇದೀಗ ಆ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಕುದುರಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ ಹೊರಡಿಸಿದ್ದು, ದೇಶದ ಯಾವುದೇ ಭಾಗದ ಜನ ಜಮ್ಮು ಕಾಶ್ಮೀರದಲ್ಲಿ ಭೂಮಿ ಖರೀದಿಸಲು ಅವಕಾಶ ನೀಡಿದೆ.
ಕಳೆದ ಬಾರಿ ಜಮ್ಮು ಕಾಶ್ಮೀರದ ವಿವಾದಾತ್ಮಕ ಕಾಯ್ದೆ 370 ಮತ್ತು 35 ಎ ಕಾಯ್ದೆಗಳನ್ನು ರದ್ದುಪಡಿಸಿದ ಬಳಿಕ ಆಸ್ತಿ ಖರೀದಿಗೆ ಅವಕಾಶ ಮುಕ್ತ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿರಲಿಲ್ಲ. ಪ್ರವಾಸೋದ್ಯಮ ಉತ್ತೇಜನಕ್ಕೂ ಯಾವುದೇ ಹೊಸ ಯೋಜನೆ ಪ್ರಕಟಿಸಿರಲಿಲ್ಲ. ಇದೀಗ ಜಮ್ಮು ಕಾಶ್ಮೀರದಲ್ಲಿಯೂ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ -2016 (ರೇರಾ) ಅನ್ನು ಅಳವಡಿಸಿ ಕೇಂದ್ರ ಸರಕಾರ ಆದೇಶ ಮಾಡಿದೆ. ಅಲ್ಲದೆ, ಆಸ್ತಿ ಖರೀದಿ ವಿಚಾರದಲ್ಲಿ ನಿಯಮಗಳನ್ನು ಸರಳಗೊಳಿಸಿದೆ.
ಇದರೊಂದಿಗೆ ತಕ್ಷಣದಿಂದಲೇ ಜಮ್ಮು ಕಾಶ್ಮೀರದಲ್ಲಿ ರೇರಾ ಕಾಯ್ದೆ ಜಾರಿಗೆ ಬರಲಿದ್ದು, ಯಾರು ಬೇಕಾದರೂ ಆಸ್ತಿ ಖರೀದಿಸಿ ವಾಸ ಮಾಡಬಹುದು. ಅಲ್ಲದೆ, ಅಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ತೀವ್ರ ಗತಿ ಪಡೆಯಲಿದೆ. ಈ ಹಿಂದೆ ಆರ್ಟಿಕಲ್ 35 ಎ ಕಾರಣದಿಂದ ಜಮ್ಮು ಕಾಶ್ಮೀರ ಹೊರತುಪಡಿಸಿ ದೇಶದ ಇತರೇ ಪ್ರಜೆಗಳು ಆಸ್ತಿ ಖರೀದಿಸಲು ಅವಕಾಶ ಇರಲಿಲ್ಲ.
ದೇಶದ ಇತರ ಪ್ರಜೆಗಳಿಗೂ ಆಸ್ತಿ ಖರೀದಿಸಲು ಕೇಂದ್ರ ಅವಕಾಶ ನೀಡಿರುವುದನ್ನು ಜಮ್ಮು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರವನ್ನು ಕೇಂದ್ರ ಮಾರಾಟಕ್ಕಿಟ್ಟಿದೆ. ಭೂಮಿಯ ಹಸ್ತಾಂತರ ಪ್ರಕ್ರಿಯೆ ಸರಳಗೊಳಿಸಿದ್ದರಿಂದ ಬಡವರಿಗೆ ಕಷ್ಟವಾಗಲಿದೆ ಎಂದಿದ್ದಾರೆ.
In a significant move, the Centre has paved the way for people from outside Jammu and Kashmir to buy land in the Union territory (UT) by amending several laws.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm