ಬ್ರೇಕಿಂಗ್ ನ್ಯೂಸ್
05-05-23 03:23 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 5 : ದೇಶಾದ್ಯಂತ ಬಿಡುಗಡೆ ಕಾಣುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಗೆ ತಡೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ. ಕೇರಳದಿಂದ 32,000 ಕ್ಕೂ ಹೆಚ್ಚು ಮಹಿಳೆಯರನ್ನು ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದ್ದ ಚಿತ್ರದ ಟೀಸರ್ ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಕೋರ್ಟಿನಲ್ಲಿ ಈ ಬಗ್ಗೆ ತಕರಾರು ಎದ್ದಿದ್ದರಿಂದ ಟೀಸರ್ ನಲ್ಲಿದ್ದ ಆ ಅಂಶವನ್ನು ತೆಗೆದು ಹಾಕಲಾಗುವುದು ಎಂದು ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ ನಿರ್ಮಾಪಕ ಸುದಿಪ್ತೋ ಸೇನ್ ಕೇರಳ ಹೈಕೋರ್ಟಿಗೆ ತಿಳಿಸಿದ್ದಾರೆ. ನ್ಯಾಯಮೂರ್ತಿ ಎನ್. ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠ ನಿರ್ಮಾಪಕರ ಹೇಳಿಕೆಯನ್ನು ದಾಖಲಿಸಿದೆ. ಆದರೆ, ಚಿತ್ರದ ಬಿಡುಗಡೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.
ಚಲನಚಿತ್ರವು "ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ" ಎಂದು ಮಾತ್ರ ಹೇಳುತ್ತದೆ ಎಂದು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಚಲನಚಿತ್ರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಪ್ರಮಾಣೀಕರಿಸಿದೆ ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಪೀಠವು 'ದಿ ಕೇರಳ ಸ್ಟೋರಿ' ಚಿತ್ರವನ್ನು ನೋಡುವ ಮೊದಲು ಟ್ರೇಲರ್ ಆಧಾರದಲ್ಲಿ ಅದರ ಪ್ರದರ್ಶನವನ್ನು ತಡೆಯಲು ನಿರಾಕರಿಸಿದೆ. ಟ್ರೇಲರ್‌ನಲ್ಲಿ ನಿರ್ದಿಷ್ಟ ಸಮುದಾಯದ ಮೇಲೆ ಆಕ್ರಮಣಕಾರಿ ವಿಚಾರವೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಚಿತ್ರದಲ್ಲಿ ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದೇನಿದೆ? ಧರ್ಮದ ವಿರುದ್ಧ ಯಾವುದೇ ಆರೋಪವಿಲ್ಲ. ಇದರಲ್ಲಿ ಇರುವುದು ಐಸಿಸ್ ಸಂಘಟನೆಯ ವಿರುದ್ಧ ಮಾತ್ರ. ಹೀಗಾಗಿ, ಇದರಲ್ಲಿ ಧಾರ್ಮಿಕ ವಿಚಾರಗಳು ಇಲ್ಲ ಎಂದು ನ್ಯಾಯಮೂರ್ತಿ ನಾಗರೇಶ್ ಅಭಿಪ್ರಾಯಪಟ್ಟಿದ್ದಾರೆ.
'ದಿ ಕೇರಳ ಸ್ಟೋರಿ' ಚಿತ್ರದಲ್ಲಿ ಕೇರಳದಲ್ಲಿ ಹಿಂದು, ಕ್ರಿಸ್ತಿಯನ್ ಯುವತಿಯರನ್ನು ಮತಾಂತರಗೊಳಿಸಿ ಸಿರಿಯಾ ಮೂಲದ ಐಸಿಸ್ ಸಂಘಟನೆಗೆ ಸೇರಿಸಿಕೊಳ್ಳಲಾಗಿದೆ ಎಂಬ ನೈಜ ಕತೆಯನ್ನು ತೋರಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು.
A division bench of the Kerala High Court on Friday refused to stay the screening of the film ‘The Kerala Story’ and rejected a petition seeking to declare that the ‘A’ certification issued by the Central Board of Film Certification (CBFC) for the movie should be declared illegal.The bench of N Nagaresh and Mohammed Nias C P rejected the petition moved by advocate V R Anoop after hearing the contentions in detail. The film was released on Friday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm