ಬ್ರೇಕಿಂಗ್ ನ್ಯೂಸ್
14-05-23 08:05 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಕರ್ನಾಟಕದ ಡಿಜಿಪಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಆಗಿರುವ ಪ್ರವೀಣ್ ಸೂದ್ ಅವರನ್ನು ಸಿಬಿಐ ಡೈರೆಕ್ಟರ್ ಆಗಿ ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿ ನೇಮಕ ಮಾಡಿದೆ.
ಮುಂದಿನ ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಇರಲಿದ್ದಾರೆ. ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25ರಂದು ಕೊನೆಗೊಳ್ಳಲಿದೆ. ಹೀಗಾಗಿ, ಶನಿವಾರ ಪ್ರಧಾನಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ಸಿಬಿಐ ನಿರ್ದೇಶಕರ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ಅಂತಿಮಗೊಳಿಸಿತ್ತು.
ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿಪಿ ಸುಧೀರ್ ಸಕ್ಸೇನಾ ಮತ್ತು ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಡಿಜಿಪಿ ತಾಜ್ ಹಸನ್ ಅವರ ಹೆಸರು ಸಿಬಿಐ ನಿರ್ದೇಶರ ಹುದ್ದೆಗೆ ಮಂಚೂಣಿಯಲ್ಲಿತ್ತು. ಕೊನೆಗೆ, ಸೇವಾನುಭವ, ಅಮೆರಿಕದಲ್ಲಿ ಮೂರು ವರ್ಷಗಳ ತರಬೇತಿ ಪರಿಗಣಿಸಿ ಪ್ರವೀಣ್ ಸೂದ್ ನೇಮಕಗೊಳಿಸಿ ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕರ್ನಾಟಕ ಕೇಡರ್ನ 1986ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್, 2020ರ ಜನವರಿ ತಿಂಗಳಲ್ಲಿ ಕರ್ನಾಟಕದ ಡಿಜಿಪಿ ಆಗಿ ನೇಮಕಗೊಂಡಿದ್ದರು.
ಮೂಲತಃ ಹಿಮಾಚಲ ಪ್ರದೇಶದ ಇವರು ಐಐಟಿ ದೆಹಲಿಯ ವಿದ್ಯಾರ್ಥಿಯಾಗಿದ್ದರು. 1985ರಲ್ಲಿ ಐಪಿಎಸ್ ಪರೀಕ್ಷೆ ತೇರ್ಗಡೆಗೊಂಡು ಕರ್ನಾಟಕದಲ್ಲಿ ಪೊಲೀಸ್ ಸೇವೆ ಆರಂಭಿಸಿದ್ದರು. ಮೊದಲು ಬಳ್ಳಾರಿ, ರಾಯಚೂರಿನಲ್ಲಿ ಸೇವೆ ಕೈಗೊಂಡು ನಂತರ, ಬೆಂಗಳೂರಿನಲ್ಲಿ ಡಿಸಿಪಿಯಾಗಿ ರಾಜಧಾನಿಯಲ್ಲಿ ಕರ್ತವ್ಯ ವಹಿಸ್ಕೊಂಡಿದ್ದರು.
ಕಳೆದ ಮಾರ್ಚ್ನಲ್ಲಿ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾಲಾಯಕ್ ಎಂದು ಜರೆದಿದ್ದರು. ಸೂದ್ ಬಿಜೆಪಿ ಸರ್ಕಾರದ ಪರ ವಹಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪ್ರವೀಣ್ ಸೂದ್ ವಿರುದ್ಧ ಕ್ರಮ ಕೈಗೊಳ್ಳುತ್ತೀವಿ ಎಂದು ಡಿಕೆಶಿ ಹೇಳಿದ್ದರು. ಇತ್ತ ಕಾಂಗ್ರೆಸ್ ಸರ್ಕಾರ ರಚನೆಯಾಗುವ ಮೊದಲೇ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ದೊಡ್ಡ ಹುದ್ದೆಗೇರಿದ್ದಾರೆ. ಡಿಕೆಶಿ ವಿರುದ್ಧ ಸಿಬಿಐನಲ್ಲಿ ಪ್ರಕರಣ ಇದ್ದು ಕೇಂದ್ರ ಸರ್ಕಾರ ಅದಕ್ಕಾಗಿಯೇ ಕರ್ನಾಟಕದ ಅಧಿಕಾರಿಯನ್ನು ಸಿಬಿಐ ಡೈರೆಕ್ಟರ್ ಹುದ್ದೆಗೆ ನೇಮಕ ಮಾಡಿದೆಯಾ ಎಂಬ ಜಿಜ್ಞಾಸೆ ಮೂಡಿದೆ.
DGP karnataka Praveen Sood appointed as the new CBI director, DK Shivakumar called Sood as Nalayak, will central govt create issues to DK by using sood? In March, DK Shivakumar had alleged that the DGP was favouring the Bharatiya Janata Party (BJP) in the state. He had alleged that around 25 cases were registered against Congress leaders and none against BJP leaders while Sood was heading the Karnataka Police.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm