ಬ್ರೇಕಿಂಗ್ ನ್ಯೂಸ್
16-05-23 01:46 pm HK News Desk ದೇಶ - ವಿದೇಶ
ಹೊಸದಿಲ್ಲಿ, ಮೇ 16: ಡಿಕೆ ಶಿವಕುಮಾರ್ ನನ್ನ ಅಣ್ಣ, ಕಾಂಗ್ರೆಸ್ ಅನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ಬಹಳಷ್ಟು ಕಷ್ಟಪಟ್ಟಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಆಸೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಹೇಳಿದ್ದಾರೆ.
ದಿಲ್ಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಕಷ್ಟದ ಸಮಯದಲ್ಲಿ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಜವಾಬ್ದಾರಿಯನ್ನು ನೀಡಿತು. ಸೋನಿಯಾ ಗಾಂಧಿಯವರು ನಿಮ್ಮ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದರು. ಡಿಕೆ ಶಿವಕುಮಾರ್ ಕೂಡ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸೋನಿಯಾ ಗಾಂಧಿಗೆ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದರು. ಅದರಂತೆ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.

ಪಕ್ಷ ಕೊಟ್ಟ ಜವಾಬ್ದಾರಿಯನ್ನು ಡಿಕೆ ಶಿವಕುಮಾರ್ ಸಮರ್ಥವಾಗಿ ನಿಭಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿ ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿಕೆ ಶಿವಕುಮಾರ್ ಕೇಳುತ್ತಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು.
ಹಿಂಸೆ, ಕಿರುಕುಳ, ಅವಮಾನ, ನಿಂದನೆಗಳನ್ನು ಡಿಕೆ ಶಿವಕುಮಾರ್ ಎದುರಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ಎಲ್ಲ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿಕೆ ಶಿವಕುಮಾರ್ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು, ಚರ್ಚೆ ನಡೆಸಿ ಸೂಕ್ತ ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ ಎಂದರು.

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕಷ್ಟಪಟ್ಟವರಿಗೆ ಫಲ ಸಿಗುತ್ತದೆ ಎಂಬ ನಂಬಿಕೆಯನ್ನು ಡಿಕೆ ಶಿವಕುಮಾರ್ ಇಟ್ಟುಕೊಂಡಿದ್ದಾರೆ. ಕೆಲವರು ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಈ ರೀತಿ ಹೇಳುವವರನ್ನು ತಡೆಯಲು ಸಾಧ್ಯವಿಲ್ಲ. ಪಕ್ಷ ತೆಗೆದುಕೊಳ್ಳುವ ನಿರ್ಧಾರ ತಿಳಿದುಕೊಳ್ಳಲು ತಾಳ್ಮೆ ಬೇಕು ಎಂದು ಹೇಳಿದರು.
ಇನ್ನು, ಡಿಕೆ ಶಿವಕುಮಾರ್ ಅವರ ಜೀವನ ತೆರೆದಿಟ್ಟ ಪುಸ್ತಕ. ಎಲ್ಲ ಮಾಧ್ಯಮದವರು ಡಿಕೆ ಶಿವಕುಮಾರ್ ಅವರ ಜೀವನದ ಪ್ರತಿಯೊಂದು ಪುಟವನ್ನು ಚೆನ್ನಾಗಿ ಓದಿಕೊಂಡಿದ್ದಾರೆ. ಅವರ ಮೇಲಿರುವ ಎಲ್ಲಾ ಕೇಸ್ಗಳು ರಾಜಕೀಯ ಪ್ರೇರಿತ ಮತ್ತು ಜೈಲಿಗೆ ಹೋಗಿದ್ದು ಸಹ ರಾಜಕೀಯ ಷಡ್ಯಂತ್ರ ಎಂದ ಡಿಕೆ ಸುರೇಶ್, ಡಿಕೆಶಿ ಮೇಲೆ ಯಾವುದೇ ಸ್ಪಷ್ಟ ಆರೋಪಗಳು ಇಲ್ಲ ಎಂದರು.
I love to see my brother as CM of Karnataka, says DK Shivakumar brother DK Suresh.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm