ಬ್ರೇಕಿಂಗ್ ನ್ಯೂಸ್
23-05-23 04:30 pm HK News Desk ದೇಶ - ವಿದೇಶ
ನವದೆಹಲಿ, ಮೇ 23: 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮಂಗಳವಾರ ಪ್ರಕಟಿಸಿದ್ದು, ಇಶಿತಾ ಕಿಶೋರ್ ಎಂಬುವವರು ಮೊದಲ ರ್ಯಾಂಕ್ ಪಡೆದಿದ್ದಾರೆ.
ಗರಿಮಾ ಲೋಹಿಯಾ ಮತ್ತು ಉಮಾ ಹರಿತಿ ಎನ್. ಎಂಬುವವರು ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಈ ಮೂಲಕ ಮೊದಲ ನಾಲ್ಕು ರ್ಯಾಂಕ್ಗಳು ಮಹಿಳಾ ಅಭ್ಯರ್ಥಿಗಳ ಪಾಲಾಗಿವೆ.
ನಾಗರಿಕ ಸೇವಾ ಪರೀಕ್ಷೆಯಲ್ಲಿ 933 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಯುಪಿಎಸ್ಸಿ ಹೇಳಿದೆ.
ನಾಗರಿಕ ಸೇವೆಗಳ ಪರೀಕ್ಷೆಯನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತದೆ (ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ). ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್)ಗೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಶಿವಮೊಗ್ಗದ ಐ.ಎನ್.ಮೇಘನಾಗೆ 617ನೇ ರ್ಯಾಂಕ್;
ಇಲ್ಲಿನ ಹಾಲ್ಕೊಳ ಬಡಾವಣೆಯ ನಿವಾಸಿ, ನಿವೃತ್ತ ಡಿಸಿಎಫ್ ಐ.ಎಂ.ನಾಗರಾಜ್ ಹಾಗೂ ಜಿ.ಜಿ.ನಮಿತಾ ದಂಪತಿ ಪುತ್ರಿ ಐ.ಎನ್.ಮೇಘನಾ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಫಲಿತಾಂಶ ಪ್ರಕಟಿಸಿದೆ. ಮೇಘನಾ ಅಖಿಲ ಭಾರತ ಮಟ್ಟದಲ್ಲಿ 617ನೇ ರ್ಯಾಂಕ್ ಪಡೆದಿದ್ದಾರೆ.
ಮೇಘನಾ ಕಳೆದ ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದರೂ ಸಂದರ್ಶನದಲ್ಲಿ ತೇರ್ಗಡೆ ಆಗಿರಲಿಲ್ಲ. ಈಗ ಎರಡನೇ ಪ್ರಯತ್ನದಲ್ಲಿ ತೇರ್ಗಡೆ ಆಗಿದ್ದಾರೆ. ಮೇಘನಾ ಬೆಂಗಳೂರಿನ ವಿಜಯನಗರದ ಇನ್ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮೈಸೂರು ಜಿಲ್ಲೆ ಬಂಡೀಪುರ ಹಾಗೂ ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದು, ಶಿವಮೊಗ್ಗದ ಸಾಂದೀಪನಿ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಪಿಯುಸಿ ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಮುಗಿಸಿದ್ದಾರೆ.
UPSC Civil Services Result 2022 out, Ishita Kishore tops exams, top 4 are women. A 933 candidates - 613 men and 320 women- were recommended by the Commission for appointment to various services. Notably, the top four positions were secured by women candidates
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm