ಬ್ರೇಕಿಂಗ್ ನ್ಯೂಸ್
23-05-23 10:46 pm HK News Desk ದೇಶ - ವಿದೇಶ
ಸಿಡ್ನಿ, ಮೇ 23 : ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾ ಸ್ಟೇಡಿಯಂ ತುಂಬಾ ಕಿಕ್ಕಿರಿದು ತುಂಬಿದ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರದಾನಿ ಮೋದಿ, ಭಾರತದಲ್ಲಿ ಸಾಮರ್ಥ್ಯ, ಸಂಪನ್ಮೂಲಕ್ಕೆ ಕೊರತೆ ಇಲ್ಲ, ಭಾರತ ಟ್ಯಾಲೆಂಟ್ ಪ್ಯಾಕ್ಟರಿ ಆಗಿದೆ ಎಂದರು.
ಜಾಗತಿಕ ಆರ್ಥಿಕತೆಯಲ್ಲಿ ಮುಂಚೂಣಿ ರಾಷ್ಟ್ರವೆಂದು ಐಎಂಎಫ್ ಪರಿಗಣಿಸಿದೆ. ಇಂದು ಹಲವಾರು ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ತೊಂದರೆಯಲ್ಲಿದೆ ಆದರೆ ಭಾರತದ ಬ್ಯಾಂಕ್ಗಳ ಬಲವನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. 100 ವರ್ಷಗಳಿಗೊಮ್ಮೆ ಎದುರಾಗುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಭಾರತ ಕಳೆದ ವರ್ಷ ದಾಖಲೆಯ ರಫ್ತು ಮಾಡಿದೆ. ನಮ್ಮ ವಿದೇಶೀ ವಿನಿಮಯ ಹೊಸ ಎತ್ತರಕ್ಕೆ ಏರುತ್ತಿದೆ. ಜಾಗತಿಕ ಒಳಿತಿಗಾಗಿ ಭಾರತ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಮ್ಮ ಡಿಜಿಟಲ್ ತಂತ್ರಜ್ಞಾನದ ಪಾಲಿದೆ. ಭಾರತದ ಫಿನ್ಟೆಕ್ ಕ್ರಾಂತಿಯ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ ಎಂದರು.

2014 ರಲ್ಲಿ ಇಲ್ಲಿಗೆ ಬಂದಾಗ ಮತ್ತೆ ಬರುವುದಾಗಿ ಭರವಸೆ ನೀಡಿದ್ದೆ. ಅದರಂತೆ ಈಗ ಮತ್ತೊಮ್ಮೆ ಸಿಡ್ನಿಯಲ್ಲಿದ್ದೇನೆ. ಈ ಹಿಂದೆ, ಭಾರತ ಮತ್ತು ಆಸ್ಟ್ರೇಲಿಯಾ ಸಂಬಂಧವನ್ನು ಕಾಮನ್ವೆಲ್ತ್, ಕ್ರಿಕೆಟ್ ಮತ್ತು ಕರಿಗಳಿಂದ ವ್ಯಾಖ್ಯಾನಿಸಲಾಗುತಿತ್ತು. ನಂತರ 'ಪ್ರಜಾಪ್ರಭುತ್ವ, ಅನಿವಾಸಿ ಭಾರತೀಯರು ಮತ್ತು ದೋಸ್ತಿಯಿಂದ ವ್ಯಾಖ್ಯಾನಿಸಲಾಗಿದೆ ಎಂದರು. ಸಂಬಂಧವು ಇಂಧನ, ಆರ್ಥಿಕತೆ ಮತ್ತು ಶಿಕ್ಷಣದ ಮೇಲೆ ಅವಲಂಬಿತವಾಗಿದ್ದರೂ ಉಭಯ ದೇಶಗಳ ಸಂಬಂಧವು ಇದನ್ನು ಮೀರಿದೆ ಅದು ಪರಸ್ಪರ ನಂಬಿಕೆ ಮತ್ತು ಪರಸ್ಪರ ಗೌರವವಾಗಿದೆ ಎಂದು ತಿಳಿಸಿದರು.


ಮಾರ್ಚ್ನಲ್ಲಿ ಕೈಗೊಂಡಿದ್ದ ಭಾರತ ಪ್ರವಾಸ ಮರೆಯಲಾಗದ ಕ್ಷಣವಾಗಿತ್ತು. ಹೋದಲ್ಲೆಲ್ಲಾ, ನಾನು ಆಸ್ಟ್ರೇಲಿಯಾ ಮತ್ತು ಭಾರತದ ಜನರ ನಡುವಿನ ಆಳವಾದ ಸಂಬಂಧವನ್ನು ಅನುಭವಿಸಿದೆ. ನೀವು ಭಾರತವನ್ನು ಅರ್ಥಮಾಡಿಕೊಳ್ಳಲು ಬಯಸಿದರೆ, ರೈಲು ಮತ್ತು ಬಸ್ನಲ್ಲಿ ಪ್ರಯಾಣಿಸಿ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದರು.
ಇದಕ್ಕೂ ಮುನ್ನಾ ವೇದ ಮಂತ್ರಗಳ ಜಯಘೋಷದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು
Prime Minister Narendra Modi, who addressed a packed stadium at Sydney's Qudos Bank Arena on Tuesday, in a veiled attack on China asserted India has no dearth of capability or resources and has the biggest and youngest talent factory. Notably, the critical remarks from Prime Minister came nearly a month after China mocked India when the United Nations officially tagged it as the most populous country in the world.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm