ಬ್ರೇಕಿಂಗ್ ನ್ಯೂಸ್
26-05-23 11:57 am HK News Desk ದೇಶ - ವಿದೇಶ
ನವದೆಹಲಿ, ಮೇ 26: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮೇ 28ರಂದು ಉದ್ಘಾಟಿಸಲು ದಿನ ನಿಗದಿಯಾಗಿದೆ. ಈ ನಡುವೆ, ಪ್ರಧಾನಿ ಮೋದಿ ಉದ್ಘಾಟನೆ ಮಾಡಬಾರದು ಎಂದು ಪ್ರತಿಪಕ್ಷಗಳು ತಗಾದೆ ಎತ್ತಿದ್ದು ಕಾರ್ಯಕ್ರಮ ಬಹಿಷ್ಕಾರ ಮಾಡಿವೆ. ಸಂಸತ್ ಕಟ್ಟಡ ಉದ್ಘಾಟನೆ ವಿಚಾರ ಭಾರೀ ವಿವಾದಕ್ಕೆ ಈಡಾಗಿರುವಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಮಾಡಬೇಕು. ಈ ಬಗ್ಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸುಪ್ರಿಂ ಕೋರ್ಟಿಗೆ ಸಲ್ಲಿಕೆಯಾಗಿದೆ. ಜಯ ಸುಕಿನ್ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದು, ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘನೆ ಮಾಡಲಾಗಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ, ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ. ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಮಾತ್ರ ಅಧಿಕಾರವಿರುತ್ತದೆ. ಹಾಗಿರುವಾಗ ಸಂಸತ್ತಿನ ಪರಮೋಚ್ಛ ಪದವಿ ಹೊಂದಿರುವ ರಾಷ್ಟ್ರಪತಿ ಅವರೇ ಸಂಸತ್ತನ್ನು ಉದ್ಘಾಟನೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಈಗಾಗಲೇ ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಮೇ 28ರ ದಿನ ನಿಗದಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಲಿದ್ದಾರೆಂದು ತಿಳಿಸಲಾಗಿದೆ. ಆದರೆ, ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭವನ್ನು ಬಹಿಷ್ಕರಿಸಲು 20 ಪ್ರತಿಪಕ್ಷಗಳು ನಿರ್ಧರಿಸಿರುವುದು ಭಾರೀ ಬಿಕ್ಕಟ್ಟಿಗೆ ಕಾರಣವಾಗಿದೆ. ದಲಿತ ವರ್ಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೊತ್ತಿ ಸಂಸತ್ತಿನ ಕಟ್ಟಡವನ್ನು ಸ್ವತಃ ಪ್ರಧಾನಿ ಅವರೇ ಉದ್ಘಾಟಿಸಲು ಮುಂದಾಗಿರುವ ನಿರ್ಧಾರವು ದೇಶಕ್ಕೆ ಎಸಗಿದ ಘೋರ ಅವಮಾನ ಮಾತ್ರವಲ್ಲ. ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.
New Parliament building inauguration Live Updates: The row over the decision to invite Prime Minister Narendra Modi to inaugurate the new parliament building instead of President Droupadi Murmu has led to over 20 Opposition parties having boycotted and around 25 attending the event. Several BJP and Opposition leaders have entered a Twitter war due to the latter boycotting the event.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm