Odisha Express Train Accident:ಒಡಿಶಾದಲ್ಲಿ ಸರಣಿ ರೈಲು ಅಪಘಾತ ; ಚದುರಿ ಬಿದ್ದ ಬೋಗಿಗಳು, ಬೆಂಗಳೂರಿನ ಇಬ್ಬರು ಮೃತ್ಯು, ಸಾವಿನ ಸಂಖ್ಯೆ 288ಕ್ಕೆ ಏರಿಕೆ

03-06-23 11:17 am       HK News Desk   ದೇಶ - ವಿದೇಶ

ಒಡಿಶಾದ ಬಾಲಾಸೋರ್ ನಲ್ಲಿ ಭೀಕರ ರೈಲು ಅಪಘಾತ ನಡೆದಿದ್ದು, ಘಟನೆಯಲ್ಲಿ ಶನಿವಾರ ಬೆಳಗ್ಗಿನ 10 ಗಂಟೆ ವರೆಗಿನ ಮಾಹಿತಿ ಪ್ರಕಾರ 288 ಮಂದಿ ಗಾಯಗೊಂಡಿದ್ದಾರೆ.

ಭುವನೇಶ್ವರ, ಜೂನ್ 3: ಒಡಿಶಾದ ಬಾಲಾಸೋರ್ ನಲ್ಲಿ ಭೀಕರ ರೈಲು ಅಪಘಾತ ನಡೆದಿದ್ದು, ಘಟನೆಯಲ್ಲಿ ಶನಿವಾರ ಬೆಳಗ್ಗಿನ 10 ಗಂಟೆ ವರೆಗಿನ ಮಾಹಿತಿ ಪ್ರಕಾರ 288 ಮಂದಿ ಗಾಯಗೊಂಡಿದ್ದಾರೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶನಿವಾರ ಸಂಜೆ ಏಳು ಗಂಟೆ ಸುಮಾರಿಗೆ ಬಾಲಾಸೋರ್ ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಪಶ್ಚಿಮ ಬಂಗಾಳದಿಂದ ತಮಿಳುನಾಡಿನ ಚೆನ್ನೈ ಹೊರಟಿದ್ದ ಶಾಲಿಮಾರ್- ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೋಗಿಗಳು ಹಳಿತಪ್ಪಿದ್ದು ನೂರಾರು ಜನ ದಿಕ್ಕಾಪಾಲಾಗಿ ಬಿದ್ದಿರುವಾಗಲೇ ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಯಶವಂತಪುರ – ಹೌರಾ ಎಕ್ಸ್ ಪ್ರೆಸ್ ರೈಲು ಅದೇ ಹಳಿಯಲ್ಲಿ ಬಂದಿದ್ದು, ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಬೋಗಿಗಳಿಗೆ ಡಿಕ್ಕಿಯಾಗಿದೆ. ಇದರಿಂದ ಭೀಕರ ದುರಂತ ಉಂಟಾಗಿದ್ದು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ರಾತ್ರಿಯಾಗಿದ್ದರಿಂದ ಅಪಘಾತದಲ್ಲಿ ಬೋಗಿಗಳ ನಡುವೆ ಸಿಲುಕಿದ್ದ ಪ್ರಯಾಣಿಕರು ಸಾವಿಗೀಡಾಗಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಬೋಗಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿವೆ. ಶನಿವಾರ ಬೆಳಗ್ಗಿನ ವರೆಗೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಗಾಯಗೊಂಡವರನ್ನು ಬಾಲಾಸೋರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳಿಗೆ ರಕ್ತದ ಕೊರತೆ ಎದುರಾಗಿದ್ದು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಿಂದ ಹೊರಟಿದ್ದ ರೈಲಿನ ಮೂರು ಬೋಗಿಗಳು ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಭಾಗದ ರೈಲ್ವೇ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ, ಬೈಯಪ್ಪನಹಳ್ಳಿಯಿಂದ ಹೊರಟಿದ್ದ ರೈಲಿನಲ್ಲಿ 994 ಮಂದಿ ಟಿಕೆಟ್ ರಿಸರ್ವ್ ಮಾಡಿದ್ದ ಪ್ರಯಾಣಿಕರಿದ್ದರು. ಅದಲ್ಲದೆ, 300ರಷ್ಟು ಟಿಕೆಟ್ ರಿಸರ್ವ್ ಮಾಡದೆ ಪ್ರಯಾಣಿಸುತ್ತಿದ್ದವರು ಇದ್ದರು. ಹೀಗಾಗಿ ಎಲ್ಲ ಪ್ರಯಾಣಿಕರ ಮಾಹಿತಿ ನಮ್ಮ ಬಳಿ ಇಲ್ಲ. ಎಷ್ಟು ಮಂದಿ ಇದ್ದರು ಅನ್ನುವ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಪ್ರಕಟಿಸಲಾಗಿದೆ. ತಮಿಳುನಾಡು ಸಚಿವರೊಬ್ಬರನ್ನು ಘಟನಾ ಸ್ಥಳಕ್ಕೆ ಕಳಿಸಿಕೊಟ್ಟಿದೆ. ಪಶ್ಚಿಮ ಬಂಗಾಳದಿಂದಲೂ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರ ಪೈಕಿ ಅತಿ ಹೆಚ್ಚು ಮಂದಿ ತಮಿಳುನಾಡಿನವರು ಎನ್ನುವ ಮಾಹಿತಿಗಳಿವೆ.

At least 288 people are dead and more than 900 injured after 10-12 coaches of the Chennai-bound Coromandel Express derailed and fell on an adjacent track in the path of another train from Yeswanthpur to Howrah near Balasore in Odisha late last night. Scroll down for latest updates.