Lionel Messi: ವೀಸಾ ತಕರಾರು ; ಚೀನಾದಲ್ಲಿ ಖ್ಯಾತ ಫುಟ್ಬಾಲ್​ ಆಟಗಾರ ಮೆಸ್ಸಿ ಬಂಧನ !

13-06-23 04:58 pm       HK News Desk   ದೇಶ - ವಿದೇಶ

ಜೂನ್ 15ರಂದು ವರ್ಕಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಸೌಹಾರ್ದ ಪಂದ್ಯಕ್ಕೆ ತೆರಳುತ್ತಿದ್ದ ವೇಳೆ ಅರ್ಜೆಂಟೀನಾ ಫುಟ್ಬಾಲ್ ತಂಡದ  ನಾಯಕ ಲಿಯೋನೆಲ್ ಮೆಸ್ಸಿ ಅವರನ್ನು ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬೀಜಿಂಗ್, ಜೂನ್ 13: ಜೂನ್ 15ರಂದು ವರ್ಕಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಸೌಹಾರ್ದ ಪಂದ್ಯಕ್ಕೆ ತೆರಳುತ್ತಿದ್ದ ವೇಳೆ ಅರ್ಜೆಂಟೀನಾ ಫುಟ್ಬಾಲ್ ತಂಡದ  ನಾಯಕ ಲಿಯೋನೆಲ್ ಮೆಸ್ಸಿ ಅವರನ್ನು ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಅರ್ಜೆಂಟೀನಾ ಮತ್ತು ಆಸ್ಟ್ರೇಲಿಯಾ ನಡುವಿನ ಸೌಹಾರ್ದ ಪಂದ್ಯದಲ್ಲಿ ತನ್ನ ದೇಶವನ್ನು ಮುನ್ನಡೆಸಲು ಲಿಯೋನೆಲ್ ಮೆಸ್ಸಿ ಚೀನಾಕ್ಕೆ ಆಗಮಿಸಿದರು. ಆಗ ಅವರನ್ನು ಚೀನಾದ ಬಾರ್ಡರ್ ಪೊಲೀಸರು  ವಿಮಾನ ನಿಲ್ದಾಣದಲ್ಲಿ ತಡೆದು ಬಂಧಿಸಿದರು.

ಮೂಲಗಳ ಪ್ರಕಾರ, ಮೆಸ್ಸಿ ಅವರ ವೀಸಾ ವಿಳಂಬವಾಗಿತ್ತು. ಮೆಸ್ಸಿ ತಮ್ಮ ಅರ್ಜೆಂಟೀನಾದ ಪಾಸ್‌ಪೋರ್ಟ್ ಬದಲಾಗಿ ತಮ್ಮ ಸ್ಪ್ಯಾನಿಷ್ ಪಾಸ್‌ಪೋರ್ಟ್ನೊಂದಿಗೆ ಪ್ರಯಾಣಿಸಿದ್ದರು. ಆದರೆ ಅದು ಚೀನಾ ವೀಸಾವನ್ನು ಹೊಂದಿರಲಿಲ್ಲ. ತಮ್ಮ ಅಜಾಗರೂಕತೆಯಿಂದಾಗಿ ಮೆಸ್ಸಿ ಚೀನಾ ಬಾರ್ಡರ್ ಪೊಲೀಸರಿಂದ ಬಂಧಿತರಾಗಿದ್ದರು. ಸುಮಾರು 30 ನಿಮಿಷಗಳ ನಂತರ ಪರಿಸ್ಥಿತಿಯನ್ನು ಬಗೆಹರಿಸಲಾಯಿತು. ಅನಂತರ ಲಿಯೋನೆಲ್ ಮೆಸ್ಸಿ ವಿಮಾನ ನಿಲ್ದಾಣದಿಂದ ನಿರ್ಗಮಿಸಿದರು.

ತನ್ನ ಸ್ಪ್ಯಾನಿಷ್ ಪಾಸ್‌ಪೋರ್ಟ್ ಹಿಡಿದುಕೊಂಡು ತನ್ನ ಸಹ ಆಟಗಾರರೊಂದಿಗೆ ಮಾತನಾಡುತ್ತಿದ್ದ ಲಿಯೋನೆಲ್ ಮೆಸ್ಸಿಯನ್ನು ಹಲವು ಪೊಲೀಸ್ ಅಧಿಕಾರಿಗಳು ತಡೆದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದೆ. 

ಮೆಸ್ಸಿ ಫುಟ್ಬಾಲ್ ಲೋಕದಲ್ಲಿ ಶ್ರೀಮಂತ ಆಟಗಾರರಲ್ಲಿ ಒಬ್ಬರು. ಅವರು ಈವರೆಗೆ ಬಾರ್ಸಿಲೋನಾ ಕ್ಲಬ್ ಪರ 778 ಪಂದ್ಯಗಳ ಮೂಲಕ ಬರೋಬ್ಬರಿ 672 ಗೋಲ್‌ಗಳನ್ನು ಬಾರಿಸಿದ್ದಾರೆ. ಮೆಸ್ಸಿ 21 ವರ್ಷದವರಿದ್ದಾಗಲೇ 8 ಗೋಲುಗಳನ್ನು ಸಿಡಿಸುವ ಮೂಲಕ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ್ದರು. ಜೊತೆಗೆ ಅರ್ಜೆಂಟೀನಾ ತಂಡ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಹಿಂದೆ ನಡೆದ ಫಿಫಾ ವಿಶ್ವಕಪ್‌ನಲ್ಲೂ ಮೆಸ್ಸಿ ಮ್ಯಾಜಿಕ್‌ನಿಂದಾಗಿಯೇ ಅರ್ಜೆಂಟೀನಾ ಕಪ್ ಗೆಲ್ಲಲು ಸಾಧ್ಯವಾಗಿತ್ತು.

Argentina's captain Lionel Messi was detained at Beijing Airport on June 10 ahead of Argentina's international friendly match against Australia at the Workers Stadium in the Chinese capital. When Messi arrived in China to lead his country in the big clash, he was stopped at the airport by the Chinese Border Police. According to reports, Messi's visa was delayed because he was traveling with his Spanish passport rather than his Argentinian passport, which did not have a Chinese visa. After about 30 minutes, the situation was resolved, and Messi exited the airport.