ಬ್ರೇಕಿಂಗ್ ನ್ಯೂಸ್
13-06-23 05:33 pm HK News Desk ದೇಶ - ವಿದೇಶ
ಚೆನ್ನೈ, ಜೂನ್ 13: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ದೊಡ್ಡ ಬಿರುಕು ಮೂಡಿಸುವ ಸಾಧ್ಯತೆ ಕಂಡುಬಂದಿದೆ.
ಜಯಲಲಿತಾ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಆಗಿದ್ದರು ಎಂಬ ಅಣ್ಣಾಮಲೈ ಹೇಳಿಕೆಯ ಬಗ್ಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷರು ದುರುದ್ದೇಶದಿಂದ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು. ಅಣ್ಣಾಮಲೈ ಅವರ ಹೇಳಿಕೆ ಬೇಜವಾಬ್ದಾರಿಯದ್ದಾಗಿದೆ, ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಕ್ರಾಂತಿಕಾರಿ ನಾಯಕಿ ಮತ್ತು ಇಧಯ ದೈವಂ (ಜಯಲಲಿತಾ ಅವರನ್ನು ಅನುಯಾಯಿಗಳು ಪ್ರೀತಿಯಿಂದ ಕರೆಯುವ ಹೃದಯದ ದೇವತೆ ಎಂಬ ವ್ಯಾಖ್ಯಾನ ) ಖ್ಯಾತಿಗೆ ಯೋಜಿತ ರೀತಿಯಲ್ಲಿ ಕಳಂಕ ತಂದಿದ್ದಾರೆಂದು ತಮಿಳುನಾಡಿನ ವಿವಿಧ ಜಿಲ್ಲೆಗಳ ಎಐಡಿಎಂಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ. ಪಳನಿಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.
ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಇಂಗ್ಲೀಷ್ ದೈನಿಕವೊಂದಕ್ಕೆ ಸೋಮವಾರ ಸಂದರ್ಶನ ನೀಡಿದ್ದ ಅಣ್ಣಾಮಲೈ, ತಮಿಳುನಾಡನ್ನು ಆಳಿದ್ದ ಹಲವು ಆಡಳಿತಗಳು ಭ್ರಷ್ಟವಾಗಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದ್ದೂ ಇದೆ. ಹಾಗಾಗಿ ತಮಿಳುನಾಡು ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂದು ಹೆಸರಾಗಿದೆ. ಜಯಲಲಿತಾ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ 1991-96ರ ನಡುವಿನ ಅವಧಿಯಲ್ಲಿ ತಮಿಳುನಾಡು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿತ್ತೆಂದು ಹೇಳುತ್ತೇನೆ ಎಂಬುದಾಗಿ ಅಣ್ಣಾಮಲೈ ಹೇಳಿದ್ದರು.
ಭ್ರಷ್ಟಾಚಾರ ಕುರಿತ ಅಣ್ಣಾಮಲೈ ಹೇಳಿಕೆಗೆ ಎಐಎಡಿಎಂಕೆ ವಿರೋಧ ವ್ಯಕ್ತಪಡಿಸಿದ್ದು ನಾಯಕರು ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಈ ರೀತಿ ಬೆಳವಣಿಗೆ ಆಗಿರುವುದು ಬಿಜೆಪಿಗೆ ಹಿನ್ನಡೆಯಾಗುತ್ತಾ ಎನ್ನುವ ಚರ್ಚೆಗೆ ಗ್ರಾಸವಾಗಿದೆ.
Tamil Nadu’s main Opposition party AIADMK Tuesday passed a resolution against state BJP president K Annamalai over his remarks against former chief minister and party supremo, the late J Jayalalithaa.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm