ಕಡಲೂರು; ಟೈಯರ್ ಬ್ಲಾಸ್ಟ್ ಅವಾಂತರ, ಬಸ್‌ಗಳ ನಡುವೆ ಭೀಕರ ಅಪಘಾತ, ನಾಲ್ವರ ಸಾವು,  70 ಮಂದಿಗೆ ಗಾಯ

19-06-23 05:36 pm       HK News Desk   ದೇಶ - ವಿದೇಶ

ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿ ಸೋಮವಾರ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ.

ಚೆನ್ನೈ, ಜೂ 19: ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿ ಸೋಮವಾರ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ.

ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಪೊಲೀಸರ ಪ್ರಕಾರ, ಪನ್ರುತಿಯಿಂದ ಕಡಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಮೇಲ್ಪಟ್ಟಂಪಕ್ಕಂ ಸಮೀಪದಲ್ಲಿದ್ದಾಗ, ಪನ್ರುತಿಯಿಂದ ಬರುತ್ತಿದ್ದ ಬಸ್‌ನ ಟೈರ್ ಒಡೆದ ಕಾರಣ ವಾಹನದ ನಿಯಂತ್ರಣ ಕಳೆದುಕೊಂಡಿದೆ. ಇದೇ ವೇಳೆ ಕಡಲೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಮತ್ತೊಂದು ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

4 killed, 70 injured as 2 buses collide head-on in Tamil Nadu; CM announces  compensation - India Today

Two buses collide in Tamil Nadu's Cuddalore; 70 people injured

Tamil Nadu: 70 injured in collision between private buses in Cuddalore  district

ಕಡಲೂರು ಕಡೆಗೆ ತೆರಳುತ್ತಿದ್ದ ಬಸ್ಸಿನ ಚಾಲಕ 33 ವರ್ಷದ ಅಂಗಲಾಮಣಿ, ತಿರುವಣನ್ಮಲೈಗೆ ತೆರಳುತ್ತಿದ್ದ ಬಸ್ಸಿನ ಕಂಡಕ್ಟರ್ ಮುರುಗನ್ ಮತ್ತು ಪ್ರಯಾಣಿಕ ಎಸ್.ಶ್ರೀನಿವಾಸನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ಕನೇ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದಿಂದಾಗಿ ಕಡಲೂರು-ಪನ್ರುತಿ ಹೆದ್ದಾರಿಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಆಂಬ್ಯುಲೆನ್ಸ್ ಬರುವ ಮುನ್ನವೇ ಇತರ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಅರ್ಪಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಕಡಲೂರು ಜಿಲ್ಲಾಧಿಕಾರಿ ಎ.ಅರುಣ್ ತಂಬುರಾಜ್, ಪಂರುತಿ ಶಾಸಕ ಟಿ.ವೇಲ್ಮುರಗನ್, ಕಡಲೂರು ಶಾಸಕ ಜಿ.ಅಯ್ಯಪ್ಪನ್ ಅವರು ಕಡಲೂರು ಸರ್ಕಾರಿ ಪ್ರಧಾನ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.

Four people were killed and close to 70 others injured after two private buses collided head-on near Melpattampakkam in Tamil Nadu’s Cuddalore district on Monday morning.