ಬ್ರೇಕಿಂಗ್ ನ್ಯೂಸ್
05-07-23 04:40 pm HK News Desk ದೇಶ - ವಿದೇಶ
ಕೋಹಿಮಾ ಜು 05: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ರಾಜ್ಯವಾದ ನಾಗಾಲ್ಯಾಂಡ್‌ನಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಭೂ ಕುಸಿತವಾದ ವರದಿಗಳಾಗಿವೆ. ಆದರೆ ಮಂಗಳವಾರ ನಡೆದ ದುರಂತದಲ್ಲಿ ಬಂಡೆಗಳು ಕಾರಿನ ಮೇಲೆ ಉರುಳಿ ಇಬ್ಬರನ್ನು ಬಲಿ ಪಡೆದುಕೊಂಡಿವೆ.
ಇಲ್ಲಿನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಧ್ವಂಸಗೊಳಿಸಿವೆ. ಪೊಲೀಸ್ ಚೆಕ್‌ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಇನ್ನು ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹಿಮಾದಿಂದ ಬರುತ್ತಿದ್ದ ವಾಹನಗಳು, ಪೊಲೀಸ್ ತಪಾಸಣೆ ಸ್ಥಳದಲ್ಲಿ ನಿಲ್ಲಿಸಿದ್ದಾಗ ಈ ದುರ್ಘಟನೆ ನಡೆದಿದೆ. ಬೆಟ್ಟದ ಮೇಲಿಂದ ಉರುಳಿ ಬರುವ ಬಂಡೆಗಳು ಕಾರನ್ನು ಧ್ವಂಸಗೊಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಂದು ಬಂಡೆ ಎರಡು ಕಾರುಗಳನ್ನು ಧ್ವಂಸಗೊಳಿಸಿದರೆ, ಅದರ ಮುಂದೆ ನಿಂತಿದ್ದ ಇನ್ನೊಂದು ಕಾರಿಗೆ ಮತ್ತೊಂದು ಬೃಹತ್ ಬಂಡೆ ಅಪ್ಪಳಿಸಿ ಕಾರು ಪಲ್ಟಿಯಾಗಿ ಪಕ್ಕದಲ್ಲಿ ನಿಂತಿದ್ದ ಟ್ರಕ್‌ಗೆ ಅಪ್ಪಳಿಸುತ್ತದೆ. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Horrible video of landslide in Nagaland.!
— Dr. Jitendra Nagar (@NagarJitendra) July 4, 2023
😳😳😳 pic.twitter.com/EuwzpgANth
Massive boulders rolled down and smashed three cars on the Kohima-Dimapur National Highway during a landslide amid rain on Tuesday. The incident took place in Chumoukedima, near a police checkpost. At least two people were killed, and three others were injured in the incident.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm