ಬ್ರೇಕಿಂಗ್ ನ್ಯೂಸ್
06-07-23 01:23 pm HK News Desk ದೇಶ - ವಿದೇಶ
ಮೆಕ್ಸಿಕೋ, ಜುಲೈ 6: ಪ್ರಯಾಣಿಕರ ಬಸ್ಸೊಂದು ಪರ್ವತದ ರಸ್ತೆಯಿಂದ ಕೆಳಗೆ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. 17 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಂಕುಡೊಂಕಾದ ರಸ್ತೆಗಳು ಮತ್ತು ಕಡಿದಾದ ಕಂದರಗಳನ್ನು ಹೊಂದಿರುವ ಪರ್ವತ ಪ್ರದೇಶದಲ್ಲಿ ನೆಲೆಗೊಂಡಿರುವ ಪಟ್ಟಣವಾದ ಮ್ಯಾಗ್ಡಲೇನಾ ಪೆನಾಸ್ಕೋದಲ್ಲಿ ಅಪಘಾತ ಸಂಭವಿಸಿದೆ.
ಬಸ್ ಅಪಘಾತದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಓಕ್ಸಾಕಾ ರಾಜ್ಯ ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ತಿಳಿಸಿದ್ದಾರೆ.
ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ಯಾಂತ್ರಿಕ ವೈಫಲ್ಯ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾಗರಿಕ ಸಂರಕ್ಷಣಾ ಸಂಸ್ಥೆ ಪ್ರಕಾರ, ಗಾಯಗೊಂಡವರಲ್ಲಿ ಕನಿಷ್ಠ ಆರು ಮಂದಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರಾಸಿಕ್ಯೂಟರ್ ಬರ್ನಾರ್ಡೊ ರೊಡ್ರಿಗಜ್ ಅಲಮಿಲ್ಲಾ ಹೇಳಿದ್ದಾರೆ.
ಸ್ಥಳೀಯ ಸಾರಿಗೆ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಹೊರಟು ಸ್ಯಾಂಟಿಯಾಗೊ ಡಿ ಯೊಸೊಂಡುವಾ ಪಟ್ಟಣಕ್ಕೆ ತೆರಳುತ್ತಿತ್ತು. ವಾಹನ ಚಾಲಕನು ಪ್ರಾಯಶಃ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ದುರದೃಷ್ಟವಶಾತ್ ಬಸ್ 25 ಮೀಟರ್ (80 ಅಡಿ) ಆಳದ ಕಂದಕಕ್ಕೆ ಬಿದ್ದಿದೆ' ಎಂದು ರಾಜ್ಯ ಅಧಿಕಾರಿ ಜೀಸಸ್ ರೊಮೆರೊ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮಗ್ಡಲೇನಾ ಪೆನಾಸ್ಕೋದಲ್ಲಿ ಸಂಭವಿಸಿದ ಅಪಘಾತಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದು ಓಕ್ಸಾಕಾ ರಾಜ್ಯ ಗವರ್ನರ್ ಸಾಲೋಮನ್ ಹೇ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
'ನಮ್ಮ ಸರ್ಕಾರಿ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡ ಜನರಿಗೆ ಎಲ್ಲಾ ಬೆಂಬಲವನ್ನು ಒದಗಿಸುತ್ತಿದ್ದಾರೆ' ಎಂದು ಅವರು ಹೇಳಿದರು.
At least 27 people were killed in Mexico when a passenger bus careened off a mountain road and plummeted into a ravine Wednesday in the southern state of Oaxaca, police said. Images from the scene showed the mangled wreckage of the vehicle lying on its side at the bottom of a steep cliff as rescuers worked nearby.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm