Humnabad Suicide: ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ಹೊಲದ‌‌ ಬಾವಿಗೆ ಹಾರಿ ತಂದೆ ಆತ್ಮಹತ್ಯೆ 

06-07-23 01:28 pm       HK News Desk   ದೇಶ - ವಿದೇಶ

ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಧುಮ್ಮನಸೂರ್ ಹೊರವಲಯದಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಹುಮನಾಬಾದ, ಜುಲೈ 6: ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಧುಮ್ಮನಸೂರ್ ಹೊರವಲಯದಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), ಮಗಳು ತನು (6), ಮಗ ಸಾಯಿರಾಜ್ (5) ಮೃತಪಟ್ಟವರು.

ಮಕ್ಕಳೊಂದಿಗೆ ತಂದೆ ಧುಮ್ಮನಸೂರ್ ಹೊರವಲಯದ ಸೇಡೋಳ ರಸ್ತೆಯಲ್ಲಿರುವ ಹೊಲದ‌‌ ಭಾವಿಗೆ ಬುಧವಾರ ತಡರಾತ್ರಿ ‌ಬಿದ್ದಿರುವ ಶಂಕೆ‌ ವ್ಯಕ್ತವಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹುಮನಾಬಾದ ಪಿಎಸ್ಐ ಮಂಜನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮೃತದೇಹಗಳಗಳನ್ನು‌ ಬಾವಿಯಿಂದ ಮೇಲೆತ್ತಿದರು. ಈ ಸಂದರ್ಭದಲ್ಲಿ ನೂರಾರು ಜನರು ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Humnabad, father commits suicide jumping with his two little children.