ಬ್ರೇಕಿಂಗ್ ನ್ಯೂಸ್
06-07-23 08:20 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 6: ಮಧ್ಯಪ್ರದೇಶದ ಮೂತ್ರ ವಿಸರ್ಜನೆ ಪ್ರಕರಣದ ಸಂತ್ರಸ್ತ, ಆದಿವಾಸಿ ಜನಾಂಗದ ದಶ್ಮತ್ ರಾವತ್ ಎಂಬ ವ್ಯಕ್ತಿಯ ಪಾದವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೊಳೆಯುವ ಮೂಲಕ ಪ್ರಾಯಶ್ಚಿತ್ತ ರೂಪದ ಕಾರ್ಯ ಮಾಡಿದ್ದಾರೆ.
ಭೋಪಾಲ್ ನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಪ್ರಕರಣದ ಸಂತ್ರಸ್ತನನ್ನು ಕರೆಸಿಕೊಂಡ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆತನ ಪಾದ ತೊಳೆದಿದ್ದಾರೆ. ಆಮೂಲಕ ಸಾರ್ವಜನಿಕ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
ಸಂತ್ರಸ್ತನನ್ನು ಕುರ್ಚಿಯಲ್ಲಿ ಕೂರಿಸಿ, ಮುಖ್ಯಮಂತ್ರಿ ಕೆಳಗೆ ಕುಳಿತು ಪಾದ ತೊಳೆಯುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದೆ. ಬಳಿಕ ಸಂತ್ರಸ್ತನಿಗೆ ಶಾಲು ಹೊದಿಸಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನರ ವೋಟು ಕಳೆದುಕೊಳ್ಳಬಾರದು ಎನ್ನುವ ದೃಷ್ಟಿಯಿಂದ ತಂತ್ರಗಾರಿಕೆ ಭಾಗವಾಗಿ ಈ ರೀತಿ ಮಾಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಬಿಜೆಪಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಆರೋಪಿ ಪ್ರವೇಶ್ ಶುಕ್ಲಾ ಸಿಗರೇಟ್ ಸೇದುತ್ತಾ, ಸಿಧಿ ಜಿಲ್ಲೆಯ ಕುಬರಿ ಮಾರುಕಟ್ಟೆಯಲ್ಲಿ ಕುಳಿತಿದ್ದ ಆದಿವಾಸಿ ವ್ಯಕ್ತಿಯನ್ನು ನಿಂದಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕ್ರಮ ಜರುಗಿಸಲು ಮುಂದಾಗಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಮಂಗಳವಾರ (ಜುಲೈ 4) ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದರು.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಜುಲೈ 5ರಂದು ಆತನಿಗೆ ಸೇರಿದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿತ್ತು. ಶುಕ್ಲಾ ವಿರುದ್ಧ ಸೆಕ್ಷನ್ 294, 504 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯಿದೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The victim of the Sidhi urination incident on Thursday said he felt good after meeting Madhya Pradesh chief minister Shivraj Singh Chouhan at his residence in Bhopal.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm