ದೆಹಲಿ ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ; ಶಾಲಾ ಬಸ್ ಡ್ರೈವರ್ ಎಡವಟ್ಟಿಗೆ ಒಂದೇ ಕುಟುಂಬದ 6 ಮಂದಿ ಬಲಿ

11-07-23 01:17 pm       HK News Desk   ದೇಶ - ವಿದೇಶ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು. 

Delhi-Meerut Expressway Accident: 6 killed in school bus-car collision near  Ghaziabad | Catch News

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್‌ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್‌ನಿಂದ ಗುರ್ಗಾಂವ್‌ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.

Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.