ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm