ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm