Manipur women paraded naked: ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ; ಪ್ರಮುಖ ಆರೋಪಿ 77 ದಿನಗಳ ಬಳಿಕ ಬಂಧನ

20-07-23 06:09 pm       HK News Desk   ದೇಶ - ವಿದೇಶ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ರಸ್ತೆ ಮೇಲೆ ಅವರನ್ನು ಮೆರವಣಿಗೆ ಮಾಡಿಸಿದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ನವದೆಹಲಿ, ಜು.20: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ರಸ್ತೆ ಮೇಲೆ ಅವರನ್ನು ಮೆರವಣಿಗೆ ಮಾಡಿಸಿದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಕೀಚಕರಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಸಾಧ್ಯತೆಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ.

ಎರಡೂವರೆ ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್​ ಆಗಿದ್ದು, ಉದ್ರಿಕ್ತ ಗುಂಪು ಅಮಾನುಷವಾಗಿ ನಡೆದುಕೊಂಡಿದೆ. ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸರಿಗೆ ಸೂಚನೆ ನೀಡಿದ್ದು, ತನಿಖೆ ಆರಂಭಿಸಲಾಗಿದೆ. ಈಗಾಗಲೇ ಓರ್ವನನ್ನು ಬಂಧಿಸಲಾಗಿದೆ. ಉಳಿದವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ತೌಬಲ್ ಜಿಲ್ಲೆಯಲ್ಲಿ ಅಪರಿಚಿತ ಸಶಸ್ತ್ರಧಾರಿ ದುಷ್ಕರ್ಮಿಗಳ ಗುಂಪು ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಅಪಹರಿಸಿ ಬೆತ್ತಲೆಗೊಳಿಸಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಮಹಿಳೆಯರು ತಮ್ಮನ್ನು ಬಿಟ್ಟುಬಿಡುವಂತೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದಾರೆ. ಕೋಪ್ರೋದ್ರಿಕ್ತ ಗುಂಪು ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ವಿಡಿಯೋದಲ್ಲಿದೆ. ನೋಂಗ್‌ಪೋಕ್ ಸೆಕ್ಮೈ ಪೊಲೀಸರು ಅಪಹರಣ, ಸಾಮೂಹಿಕ ಅತ್ಯಾಚಾರ, ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಎಂ ಟ್ವೀಟ್​:ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದು, ವೈರಲ್​ ಆಗಿರುವ ಮಹಿಳೆಯರ ವಿಡಿಯೋ ಕಂಡು ಆಘಾತವಾಗಿದೆ. ಅಮಾನವೀಯ ಕೃತ್ಯಕ್ಕೆ ಒಳಗಾದ ಅವರ ಪರವಾಗಿ ನನ್ನ ಹೃದಯ ಮಿಡಿಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಓರ್ವನನ್ನು ಈಗಾಗಲೇ ಬಂಧಿಸಲಾಗಿದೆ. ಸೂಕ್ತ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಕ್ರಮ ಆಗುವಂತೆ ನೋಡಿಕೊಳ್ಳಲಾಗುವುದು. ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಅವರು ಹೇಳಿದ್ದಾರೆ.

The Manipur Police jumped into action in the 2 mont old case of gang rape and murder in B. Phainom village on May 4 after a horrifying video of the incident went viral on July 19. As per reports, a man named Huirem Herodas Meitei, aged 32 years, has been arrested. He was seen in the video wearing a green t-shirt and grabbing one of the women victims when they were paraded naked. Meitei is from Pechi Awang Leikai.