ಬ್ರೇಕಿಂಗ್ ನ್ಯೂಸ್
24-07-23 01:36 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜು.24: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್‌ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 57-year-old assistant commissioner of police (ACP) allegedly shot dead his wife and nephew with a gun before shooting himself fatally at his home in Maharashtra's Pune city on Monday, an official said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm