ಬ್ರೇಕಿಂಗ್ ನ್ಯೂಸ್
05-11-20 12:02 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ನವೆಂಬರ್ 05: ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷ ಗದ್ದುಗೆಯಿಂದ ಡೊನಾಲ್ಡ್ ಟ್ರಂಪ್ ನಿರ್ಗಮಿಸುವುದು ಬಹುತೇಕ ಖಚಿತವಾಗಿದೆ. ಅತ್ಯಂತ ತೀವ್ರ ಹಣಾಹಣಿ ಏರ್ಪಟ್ಟಿರುವ ಅಧ್ಯಕ್ಷ ಹುದ್ದೆಯ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಜೋ ಬಿಡೆನ್ ಅತಿ ಹೆಚ್ಚು ಮತಗಳನ್ನು ಪಡೆದಿದ್ದು ಹೊಸ ಅಧ್ಯಕ್ಷರಾಗಿ ಗದ್ದುಗೆ ಏರಲು ರೆಡಿಯಾಗಿದ್ದಾರೆ.
ಹಾಲಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅಧ್ಯಕ್ಷ ಹುದ್ದೆಗೇರಲು ತೀವ್ರ ಸ್ಪರ್ಧೆ ಒಡ್ಡಿದ್ದಾರೆ.
ಸದ್ಯಕ್ಕೆ ಜೋ ಬಿಡೆನ್ 264 ಮತಗಳನ್ನು ಪಡೆದಿದ್ದರೆ, ಟ್ರಂಪ್ 214 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ಗೆರೆ 270 ಮತಗಳಾಗಿದ್ದು ಇನ್ನು ಕೇವಲ ಆರು ಮತಗಳಷ್ಟೇ ಜೋ ಬಿಡೆನ್ ಗೆ ಅಗತ್ಯವಾಗಿರುತ್ತದೆ. ಈ ನಡುವೆ, ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆಯೇ ಡೊನಾಲ್ಡ್ ಟ್ರಂಪ್, ಮತ ಎಣಿಕೆಯನ್ನು ಸ್ಥಗಿತಗೊಳಿಸಲು ಹುನ್ನಾರ ನಡೆಸಿದ್ದಾರೆ. ಮತ ಎಣಿಕೆಯಲ್ಲಿ ಲೋಪ ಆಗಿದೆಯೆಂದು ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿರುವ ಟ್ರಂಪ್, ಅದಕ್ಕಾಗಿ ಕೆಲವು ಮತಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.
ಸದ್ಯಕ್ಕೆ ಅರಿಝೋನಾ ಮತ್ತು ನೆವಾಡಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು ಇದರ ಫಲಿತಾಂಶ ಹೊರಬಿದ್ದೊಡನೆ ಗೆಲುವು ಯಾರಿಗೆ ಎನ್ನುವುದು ಖಚಿತವಾಗಲಿದೆ. ಆದರೆ, ವಿಸ್ಕನ್ಸಿನ್ ಮತ್ತು ಜೋರ್ಜಿಯಾ ಮತ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಲೇ ಬೇಕೆಂದು ಟ್ರಂಪ್ ಸುಪ್ರೀಂ ಮೆಟ್ಟಿಲೇರಿದ್ದಾರೆ.
ಈ ನಡುವೆ, ಟ್ರಂಪ್ ಸೋಲಾದರೆ ಒಂದ್ಕಡೆ ಕಾನೂನು ಹೋರಾಟ, ಮತ್ತೊಂದೆಡೆ ಇಡೀ ದೇಶದಲ್ಲಿ ಗಲಭೆ ಎಬ್ಬಿಸಲು ತಯಾರಿ ನಡೆದಿದೆ ಎನ್ನಲಾಗುತ್ತಿದೆ. ಜೋ ಬಿಡೆನ್ ಗೆ ಅಧಿಕಾರ ಹಸ್ತಾಂತರ ಮಾಡದೆ ಕಾನೂನು ಹೋರಾಟಕ್ಕೆ ಟ್ರಂಪ್ ತಯಾರಿ ನಡೆಸಿದ್ದಾರೆಂಬ ಮಾತು ಕೇಳಿಬರುತ್ತಿದೆ.
Democratic Presidential candidate Joe Biden has expressed confidence that he will win the election and has enough states in the bag to reach the magic number of 270 electoral votes.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm