ಬ್ರೇಕಿಂಗ್ ನ್ಯೂಸ್
03-08-23 06:19 pm HK News Desk ದೇಶ - ವಿದೇಶ
ಅಲಹಾಬಾದ್, ಆಗಸ್ಟ್ 3 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಪ್ರಕರಣದಲ್ಲಿ ಖಚಿತ ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ ಎಂದು ತೀರ್ಪು ನೀಡಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ಬಳಿಕ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷೆಗೆ ಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದುಗಳ ಪರವಾಗಿ ವಾದಿಸಿದ್ದ ವಕೀಲ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಮಸೀದಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರು ತಮಗೆ ಪೂಜೆಗೆ ಅವಕಾಶ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿತ್ತು. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇದರೊಳಗೆ ಶಿವನ ದೇಗುಲವಿದೆ ಎಂದು ಹಿಂದುಗಳ ಕಡೆಯ ವಕೀಲರು ವಾದಿಸಿದ್ದರು.
he Allahabad High Court, on Thursday, upheld a Varanasi court’s order allowing the Archaeological Survey of India (ASI) to conduct a survey of the Gyanvapi mosque complex, and dismissed the Muslim side’s petition challenging the survey. Chief Justice Pritinker Diwaker said that the Varanasi court was justified in ordering the ASI survey and that the scientific survey is necessary in the interest of justice.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am