ಬ್ರೇಕಿಂಗ್ ನ್ಯೂಸ್
03-08-23 07:11 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3: ಮಂದಿರವಾದರೂ, ಮಸೀದಿಯಾದರೂ ದೇವರು ಒಬ್ಬನೇ. ನೀವು ಅವನನ್ನು ಯಾವುದಾದ್ರೂ ಒಂದು ಕಡೆ ನೋಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಅವರಣದಲ್ಲಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿ ದೆಹಲಿಯ ಸಂಸತ್ ಆವರಣದಲ್ಲಿ ಪ್ರತಿಕ್ರಿಯೆ ನೀಡಿರುವ ಫಾರೂಕ್ ಅಬ್ದುಲ್ಲಾ, 'ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ.. ನೀವು ಅವನನ್ನು (ದೇವರು) ಮಂದಿರ ಅಥವಾ ಮಸೀದಿ ಒಂದು ಸ್ಥಳದಲ್ಲಿ ನೋಡಬಹುದು ಎಂದು ಹೇಳಿದ್ದಾರೆ.
ಹೈಕೋರ್ಟ್ ಆದೇಶಕ್ಕೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಪ್ರಕರಣಕ್ಕೆ ಸಂಬಂಧಿಸಿದಂತೆ Places of Worship Act ಜಾರಿಗೊಳಿಸಬೇಕು ಎಂದು ಆಗ್ರಹಿಸಿದೆ. ಈ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಮಂಡಳಿ ಸದಸ್ಯ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಅವರು, “ಈ ಮಸೀದಿಯು ಸುಮಾರು 600 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಕಳೆದ 600 ವರ್ಷಗಳಿಂದ ಮುಸ್ಲಿಮರು ಇಲ್ಲಿ ನಮಾಜ್ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ Places of Worship Act ಜಾರಿಗೊಳಿಸಬೇಕು. ಮುಸ್ಲಿಮರು ಶತಮಾನಗಳಿಂದ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಸಂಪರ್ಕಿಸುವ ಬಗ್ಗೆ ಯೋಚನೆ ಇದೆ ಎಂದಿದ್ದಾರೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
Whether it is a temple or a mosque, there is only one God. You can see him somewhere," former Jammu and Kashmir CM and National Conference (NC) party president Farooq Abdullah said. Reacting to the Allahabad High Court's decision to allow a scientific survey of the Gyanvapi mosque premises, Abdullah said, "Whether it is a temple or a mosque, there is only one God. You can see him (God) in a temple or a mosque in one place," he said.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm