ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm