ಬ್ರೇಕಿಂಗ್ ನ್ಯೂಸ್
20-08-23 09:32 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 20: ಭಾರತ ಸೇರಿದಂತೆ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ಲ್ಯಾಂಡಿಂಗ್ನ ದಿನ ಮತ್ತು ಸಮಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಮೂರೇ ದಿನಗಳಲ್ಲಿ ಭಾರತ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಸಜ್ಜಾಗಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಲಾದ ಜಾಗದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ಆಗಸ್ಟ್ 23 ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಇಳಿಯಲಿದೆ ಎಂದು ಇಸ್ರೋ ಭಾನುವಾರ ಅಧಿಕೃತವಾಗಿ ಘೋಷಿಸಿದೆ. ಕೋಟ್ಯಂತರ ಭಾರತೀಯರ ಕನಸು ನನಸಾದಲ್ಲಿ, ಈ ವಿಕ್ರಮ ಸಾಧಿಸಿದ ವಿಶ್ವದ ನಾಲ್ಕನೇ ಮತ್ತು ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶ ಎಂಬ ಹಿರಿಮೆಗೆ ಭಾರತ ಪಾತ್ರವಾಗಲಿದೆ.
ಚಂದ್ರಯಾನ-3 ಆಗಸ್ಟ್ 23, 2023 ರಂದು 06:04 ನಿಮಿಷಕ್ಕೆ ಚಂದ್ರನ ಮೇಲೆ ಲ್ಯಾಂಡರ್ ಇಳಿಯಲಿದೆ. ಇಷ್ಟು ದಿನಗಳ ಪ್ರಯಾಣಕ್ಕೆ ಶುಭ ಕೋರಿದ ಮತ್ತು ಸಕಾರಾತ್ಮಕ ಮನೋಭಾವಕ್ಕೆ ಧನ್ಯವಾದಗಳು. ಮುಂದಿನ ಪ್ರಯಾಣವನ್ನು ಒಟ್ಟಿಗೆ ಮುಂದುವರಿಸೋಣ" ಎಂದು ಇಸ್ರೋ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಬರೆದುಕೊಂಡಿದೆ. ಜೊತೆಗೆ ಈ ಸಾಹಸವನ್ನು ಇಸ್ರೋದ ವೆಬ್‌ಸೈಟ್, ಅದರ ಯೂಟ್ಯೂಬ್ ಚಾನಲ್, ಫೇಸ್ಬುಕ್ ಮತ್ತು ಡಿಡಿ ನ್ಯಾಷನಲ್ ಚಾನಲ್ನಲ್ಲಿ 05.27 ರಿಂದ ನೇರಪ್ರಸಾರ ಲಭ್ಯವಿರಲಿದೆ ಎಂದು ತಿಳಿಸಿದೆ.
ಚಂದ್ರನ ಮೇಲೆ ಇಳಿಯುವ ಲ್ಯಾಂಡರ್ಗೆ 'ವಿಕ್ರಮ್' ಎಂದು ಹೆಸರಿಸಲಾಗಿದೆ. ಅದರಲ್ಲಿರುವ ರೋವರ್ ಚಂದ್ರನ ಮೇಲ್ಮೈ ಅಧ್ಯಯನ ನಡೆಸಲಿದೆ. ಕೆಲ ದಿನಗಳ ಹಿಂದಷ್ಟೇ ಚಂದ್ರಯಾನ-3 ಗಗನನೌಕೆ ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಮಾಡ್ಯೂಲ್ ಬೇರ್ಪಟ್ಟಿತ್ತು. ಇದಾದ ಬಳಿಕ ಸಾಫ್ಟ್ ಲ್ಯಾಂಡಿಂಗ್ಗೆ ನಿರ್ಣಾಯಕವಾದ 'ಡಿಬೂಸ್ಟಿಂಗ್' ನಡೆಸಿ ಚಂದ್ರನ ಸುಮಾರು 100 ಕಿಮೀ ಅಂತರದಲ್ಲಿ ಲ್ಯಾಂಡರ್ ಅನ್ನು ತಂದು ನಿಲ್ಲಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ಇಸ್ರೋ) ಜುಲೈ 14 ರಂದು ಚಂದ್ರಯಾನ-3 ಗಗನನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು. ನೌಕಾಯಾನ ಆರಂಭವಾಗಿ ಇಂದಿಗೆ ಒಂದು ತಿಂಗಳು ಮತ್ತು ಆರು ದಿನಗಳು ಕಳೆದಿವೆ. ಬಾಹುಬಲಿ ಎಂದೇ ಖ್ಯಾತಿಯಾದ ಜಿಎಸ್ಎಲ್ವಿ ಮಾರ್ಕ್ 3 ದೈತ್ಯ ವಾಹನದಲ್ಲಿನ ಉಪಗ್ರಹವನ್ನು ಆಗಸ್ಟ್ 5 ರಂದು ಚಂದ್ರನ ಕಕ್ಷೆಗೆ ಸೇರಿಸಲಾಗಿತ್ತು. ಅಂದಿನಿಂದ ಹಲವು ಕಕ್ಷೆ ಇಳಿಸುವ ಯತ್ನ ನಡೆಸಿ ಇದೀಗ ಚಂದ್ರನ ಚುಂಬಿಸಲು ದಿನಗಣನೆ ಆರಂಭವಾಗಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಲಾದ ಜಾಗದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ಆಗಸ್ಟ್ 23 ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಇಳಿಯಲಿದೆ ಎಂದು ಇಸ್ರೋ ಭಾನುವಾರ ಅಧಿಕೃತವಾಗಿ ಘೋಷಿಸಿದೆ. ಕೋಟ್ಯಂತರ ಭಾರತೀಯರ ಕನಸು ನನಸಾದಲ್ಲಿ, ಈ ವಿಕ್ರಮ ಸಾಧಿಸಿದ ವಿಶ್ವದ ನಾಲ್ಕನೇ ಮತ್ತು ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶ ಎಂಬ ಹಿರಿಮೆಗೆ ಭಾರತ ಪಾತ್ರವಾಗಲಿದೆ.
India's Chandrayaan-3 moved closer to the Moon on August 20, after the Lander Module (LM) successfully completed its second and final de-boosting operation. With this, the lander has reached an orbit where the closest point to the Moon is 25 km and the farthest is 134 km, the Indian Space Research Organisation (ISRO) informed on Sunday.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm