ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm