ಬ್ರೇಕಿಂಗ್ ನ್ಯೂಸ್
12-09-23 09:39 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.12: ಕೋಝಿಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ದೃಢಪಡಿಸಿದ್ದಾರೆ.
ಇದಲ್ಲದೆ, ಮೃತರ ನಿಕಟ ಸಂಬಂಧಿಗಳಾದ ನಾಲ್ಕು ಮಂದಿ ನಿಫಾ ವೈರಸ್ ಸೋಂಕಿಗೆ ಒಳಗಾಗಿರುವ ಬಗ್ಗೆ ಶಂಕಿಸಲಾಗಿದ್ದು, ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಇತ್ತೀಚೆಗೆ ಇಬ್ಬರು ಸಾವನ್ನಪ್ಪಿದ್ದು ನಿಫಾ ವೈರಸ್ ಸೋಂಕು ತಗಲಿದ್ದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಮೃತರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ನಿಫಾ ವೈರಸ್ ಸೋಂಕು ದೃಢಪಟ್ಟಿದೆ. ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಆಗಸ್ಟ್ 30ರಂದು ಕೋಯಿಕ್ಕೋಡ್‌ನಲ್ಲಿ ಮೊದಲ ಶಂಕಿತ ವ್ಯಕ್ತಿ ಸಾವನ್ನಪ್ಪಿದ್ದರು. 49 ವರ್ಷದ ಇವರು, ಆ.27ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ಈ ವ್ಯಕ್ತಿಯ ಮಾದರಿಯನ್ನು ನಿಫಾ ವೈರಸ್ ಶಂಕೆಯಲ್ಲಿ ಪರೀಕ್ಷೆ ನಡೆಸಿರಲಿಲ್ಲ. ಈತನ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.
ಆಯಂಚೇರಿ ಮೂಲದ 40 ವರ್ಷದ ವ್ಯಕ್ತಿಯೊಬ್ಬರು ವಡಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಸೋಮವಾರ ಮೃತಪಟ್ಟಿದ್ದರು. ರೋಗ ಲಕ್ಷಣಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಆಸ್ಪತ್ರೆ ವೈದ್ಯರು ಹೆಚ್ಚುವರಿ ಪರೀಕ್ಷೆಗೆ ರವಾನಿಸಿದ್ದರು. ಅಲ್ಲದೇ, ಮೃತದೇಹವನ್ನು ಸಂಬಂಧಿಕರಿಗೆ ವೈದ್ಯರು ಹಸ್ತಾಂತರಿಸಿರಲಿಲ್ಲ. ಇದೀಗ ಇಬ್ಬರಿಗೂ ನಿಫಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.
ಮೃತಪಟ್ಟ ವ್ಯಕ್ತಿಗಳ ಸಂಪರ್ಕದಲ್ಲಿದ್ದ 75 ಜನರ ಪಟ್ಟಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದ್ದು ನಿಗಾ ವಹಿಸಿದೆ. ಈ ಪೈಕಿ ಮೃತ ವ್ಯಕ್ತಿಯ ಮಕ್ಕಳಾದ 5 ಮತ್ತು 9 ವರ್ಷದ ಇಬ್ಬರು ಮತ್ತು 22 ವರ್ಷದ ಸಂಬಂಧಿ ಹಾಗೂ ಒಂಬತ್ತು ತಿಂಗಳ ಮಗುವೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಇದರಲ್ಲಿ 9 ವರ್ಷದ ಬಾಲಕನ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ಇವರ ಮಾದರಿಗಳನ್ನು ಸಹ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. 2018ರ ಮೇನಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ದೃಢಪಟ್ಟಿತ್ತು. 2021ರಲ್ಲಿ ಚಾತಮಂಗಲಂನಲ್ಲಿ 12 ವರ್ಷದ ಬಾಲಕ ನಿಫಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದು ದೃಢವಾಗಿತ್ತು.
The Kerala Health Department sounded a health alert in Kozhikode district on Monday following two "unnatural" deaths suspected to be due to the Nipah virus infection.
03-04-25 09:44 pm
Bangalore Correspondent
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
03-04-25 11:10 pm
HK News Desk
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
03-04-25 10:14 pm
Dinesh Nayak, Mangaluru Correspondent
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm