ಬ್ರೇಕಿಂಗ್ ನ್ಯೂಸ್
26-10-23 11:01 pm HK News Desk ದೇಶ - ವಿದೇಶ
ನವದೆಹಲಿ, ಅ.26: ಭಾರತ ಮೂಲದ ಎಂಟು ಮಂದಿ ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಒಂದು ವರ್ಷದ ಹಿಂದೆ ಕತಾರ್ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಎಂಟು ಮಂದಿಯನ್ನ ನಿಗೂಢ ರೀತಿಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಲ್ಲಿದ್ದು ನಿವೃತ್ತಿಯಾಗಿದ್ದ ಎಂಟು ಮಂದಿ ಅಧಿಕಾರಿ ಹುದ್ದೆಗಳಲ್ಲಿದ್ದವರು ಕತಾರ್ ಸರಕಾರದ ಅಧೀನದಲ್ಲಿರುವ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿನ ನೌಕಾಪಡೆ ಸದಸ್ಯರಿಗೆ ತರಬೇತಿ ನೀಡುವುದು ಇವರ ಕೆಲಸವಾಗಿತ್ತು. ಹತ್ತು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದವರನ್ನು 2022ರ ಆಗಸ್ಟ್ ತಿಂಗಳಲ್ಲಿ ಕತಾರ್ ಅಧಿಕಾರಿಗಳು ಬಂಧಿಸಿದ್ದರು. ಅಧಿಕೃತವಾಗಿ ಯಾಕಾಗಿ ಬಂಧಿಸಿದ್ದಾರೆಂದು ಹೇಳಿಲ್ಲವಾದರೂ, ಅಲ್ಲಿನ ಮಾಧ್ಯಮ ವರದಿಗಳ ಪ್ರಕಾರ, ಇವರು ಇಸ್ರೇಲ್ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದರು ಎಂಬ ಆರೋಪ ಹೊರಿಸಲಾಗಿದೆ.
ಕ್ಯಾಪ್ಟನ್ ನವಜೀತ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಶಿಷ್ಟ, ಕಮಾಂಡರ್ ಪುನೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಳ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗಪಾಲ್ ಮತ್ತು ಸೈಲರ್ ರಾಘೇಶ್ ಶಿಕ್ಷೆಗೊಳಗಾದವರು. ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿರುವ ಬಗ್ಗೆ ಭಾರತದ ವಿದೇಶಾಂಗ ಇಲಾಖೆ ಆಘಾತ ವ್ಯಕ್ತಪಡಿಸಿದ್ದು, ಕೋರ್ಟ್ ತೀರ್ಪಿನ ಪ್ರತಿಯನ್ನು ಕಾಯುತ್ತಿದ್ದೇವೆ. ಕುಟುಂಬಸ್ಥರ ಜೊತೆಗೂ ಸಂಪರ್ಕದಲ್ಲಿದ್ದೇವೆ. ಕಾನೂನು ಪ್ರಕ್ರಿಯೆ ನಡೆಸುವುದಕ್ಕೆ ತಯಾರಿ ನಡೆಸಿದ್ದೇವೆ ಎಂದು ತಿಳಿಸಿದೆ. ಬಂಧನ ಆಗಿ ಒಂದು ವರ್ಷ ಕಳೆದರೂ ಕತಾರ್ ಸರಕಾರ, ಬಂಧನದ ಕಾರಣದ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ ಎನ್ನಲಾಗುತ್ತಿದೆ.
ಇದೇ ವೇಳೆ, ಕಾಂಗ್ರೆಸ್ ಕೂಡ ಭಾರತೀಯರಿಗೆ ಗಲ್ಲು ಶಿಕ್ಷೆ ವಿಧಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಟ್ವೀಟ್ ಮಾಡಿ, ವಿಶ್ವ ಗುರು ಮೋದಿ ಕೂಡಲೇ ತಮ್ಮ ಶಕ್ತಿ ಪ್ರದರ್ಶಿಸಬೇಕು. ಗಲ್ಲು ಶಿಕ್ಷೆಗೊಳಗಾದ ಭಾರತೀಯರನ್ನು ರಕ್ಷಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
A court in Qatar has handed down the death penalty to eight former Indian Navy personnel who have been detained in the country for over a year. The Indian government expressed shock over the sentencing and vowed to explore all available legal options to secure the release of its citizens.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm