ಬಿಲಿಯನೇರ್ ಅಂಬಾನಿಗೆ ಕೊಲೆ ಬೆದರಿಕೆ ; 20 ಕೋಟಿ ಕೊಡಿ, ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಇಮೇಲ್‌ !

28-10-23 12:53 pm       HK News Desk   ದೇಶ - ವಿದೇಶ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.

ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.

ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್‌ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.

ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

6 Types of Email Threats and How to Mitigate Them | Penta Security Inc.

ಕೊಲೆ ಬೆದರಿಕೆ ಇದೆ ಮೊದಲಲ್ಲ:

ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್‌ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.

Reliance Industries Chairman Mukesh Ambani received death threats via email threatening to kill him if he failed to pay ₹20 crores.