Kerala Church Bomb: ಕೇರಳ ಜೆಹೊವಾಹ್ ವಿಟ್ನೆಸ್ ಚರ್ಚ್ ಸರಣಿ ಬಾಂಬ್ ಸ್ಫೋಟ ; ಮೃತರ ಸಂಖ್ಯೆ 3ಕ್ಕೆ ಏರಿಕೆ

30-10-23 12:02 pm       HK News Desk   ದೇಶ - ವಿದೇಶ

ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೊಚ್ಚಿ, ಅ 30: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಹಲವು ಮಂದಿ ಗಂಭೀರ ಗಾಯಗೊಂಡು ಕೇರಳದ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.

Kerala blasts: Toll climbs to 3 after girl dies at hospital; all-party meet  underway - India Today

Kerala Blast News highlights: NSG team arrives in Kerala post explosion |  Hindustan Times

ಘಟನೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಎಫ್‌ಐಆರ್ ಕೂಡ ದಾಖಲಾಗಿದೆ.

ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಕಲಮಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಬೆಳಿಗ್ಗೆ 9.40ಕ್ಕೆ ಈ ಸ್ಫೋಟ ನಡೆದಿದೆ. ಮೂರು ದಿನಗಳ ಸಮಾವೇಶದ ಕೊನೆಯ ದಿನವಾದ ಭಾನುವಾರ ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಸಭಾ ಭವನದ ಒಳಗೆ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 

ಘಟನೆ ನಡೆದ ಕೆಲವು ತಾಸುಗಳ ಬಳಿಕ, ಯಹೋವನ ಸಾಕ್ಷಿಗಳು ಪಂಥದ ಸದಸ್ಯನೆಂದು ಹೇಳಿಕೊಂಡ 48 ವರ್ಷ ವಯಸ್ಸಿನ ಡಾಮಿನಿಕ್ ಮಾರ್ಟಿನ್‌ ಎಂಬಾತ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ‘ಸ್ಫೋಟಕ್ಕೆ ನಾನೇ ಕಾರಣ’ ಎಂದು ಹೇಳಿಕೊಂಡಿದ್ದಾನೆ ಎಂದು ಕೇರಳದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ಸ್ಫೋಟದ ನಂತರದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

One person died and over 20 injured after multiple explosions took place at a prayer meeting of Jehovah's Witnesses in the Kalamassery area of Kerala's Kochi on Sunday morning, police said. State Industries Minister P Rajeev said the blast site is cordoned off and police and fire rescue have been pressed into service.