ಡಿಸೆಂಬರ್ 4 ರಿಂದ 19 ದಿನ ಸಂಸತ್ತಿನ ಚಳಿಗಾಲದ ಅಧಿವೇಶನ ; ಪಂಚರಾಜ್ಯ ಚುನಾವಣೆ ಫಲಿತಾಂಶ ಮರುದಿನವೇ ಸಂಸತ್ತು 

09-11-23 08:05 pm       HK News Desk   ದೇಶ - ವಿದೇಶ

ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ‌

ನವದೆಹಲಿ, ನ.9: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ‌

ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಪ್ರಮುಖ ವಿಚಾರಗಳು ಚರ್ಚೆಗೆ ನಿರೀಕ್ಷೆಯಿದೆ ಎಂದಿದ್ದಾರೆ.‌

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಇದರ ಮರುದಿನವೇ ಹೊಸ ಸಂಸತ್ ಕಟ್ಟಡದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಐದು ರಾಜ್ಯಗಳ ಚುನಾವಣೆಗಳಿಂದಾಗಿ ಅದನ್ನು ಡಿಸೆಂಬರ್ ಗೆ ಮುಂದೂಡಲಾಗಿದೆ. ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

The Winter session of Parliament will commence from 4th December and continue till 22nd December, Union Minister of Parliamentary Affairs Pralhad Joshi said today.