ಬ್ರೇಕಿಂಗ್ ನ್ಯೂಸ್
11-11-23 01:13 pm HK News Desk ದೇಶ - ವಿದೇಶ
ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ
ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.
ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :
ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm