Accident in Jammu and Kashmir: ಕಾಶ್ಮೀರ ಕಣಿವೆಯ 300 ಅಡಿ ಹೊಂಡಕ್ಕೆ ಬಿದ್ದ ಸಾರಿಗೆ ಬಸ್ ; 36 ಪ್ರಯಾಣಿಕರು ಸಾವು 

15-11-23 04:02 pm       HK News Desk   ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು 300 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ 36 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. 

ನವದೆಹಲಿ, ನ.15: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು 300 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ 36 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. 

ಬಸ್ಸಿನಲ್ಲಿ ಸುಮಾರು 55 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು 19 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸಾರಿಗೆ ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಪ್ರಯಾಣಿಕರ ರಕ್ಷಣೆಗೆ ಸೇನಾ ಸಿಬಂದಿ ಹೆಲಿಕಾಪ್ಟರ್ ಬಳಕೆ ಮಾಡಿದ್ದಾರೆ.‌ ಆದರೆ ತೀವ್ರ ಗಾಯಗೊಂಡಿದ್ದ ಹೆಚ್ಚಿನ ಪ್ರಯಾಣಿಕರು ಸ್ಥಳದಲ್ಲೇ ಸಾವು ಕಂಡಿದ್ದಾರೆ.‌

36 killed, 19 hurt as bus falls into gorge in Doda: Officials – Statetimes

At least 30 dead, dozens injured as bus falls into gorge in Jammu and Kashmir's  Doda | Hindustan Times

ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

At least 36 people were killed and 19 injured when a bus carrying passengers skidded off the road and rolled down into a 300-foot gorge in Jammu and Kashmir's Doda district on Wednesday, officials said.