ಬ್ರೇಕಿಂಗ್ ನ್ಯೂಸ್
20-11-23 06:31 pm HK News Desk ದೇಶ - ವಿದೇಶ
ಅಹಮದಾಬಾದ್, ನ.20: ಆಸ್ಟ್ರೇಲಿಯ 6ನೇ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್ ರೂಮ್ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್ ಆಗಿದೆ
ವೈರಲ್ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ಮಾರ್ಷ್ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್ಗೆ 450 ರನ್ ಬಾರಿಸುತ್ತದೆ, ಭಾರತ 65 ರನ್ಗೆ ಆಲೌಟ್ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್ ಬಾರಿಸಿ 15ರನ್ಗೆ ಔಟಾಗಿದ್ದರು.
ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 240 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್ 137 ರನ್ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.
ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ನಡೆದ ಏಕ ದಿನ ವಿಶ್ವ ಕಪ್ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್ಗಳಿಂದ ಸೋಲು ಕಂಡಿತ್ತು.
That's the Difference, So Proud of my Country and its Culture ❤️🇮🇳#MitchellMarsh pic.twitter.com/KEWmMa5WfO
— Priyanka Sharma 🇮🇳 (@Priyankabjym) November 20, 2023
Ban all Australians from IPL....
— Arpita Chatterjee (@asliarpita) November 20, 2023
Shame on #MitchellMarsh pic.twitter.com/dCpG9bbcve
There is a huge difference between dominance and disrespect.
— Swati (@swati_senger) November 20, 2023
Shameful behaviour#MitchellMarsh #INDvsAUSfinal pic.twitter.com/whPnIXdukh
Shame on You @ImMitchelmarsh and @CricketAus . Such a disgusting thing that he put his legs on @cricketworldcup . Such a shame. Take some action against them @ICC . He would have respected the cup. Such a shameless behavior by him..#ICCCricketWorldCup #ICC #MitchellMarsh pic.twitter.com/x1993Ndsfq
— Mega Shabeer RC (@MegaShabeer) November 20, 2023
A picture that is going viral on social media shows Australian cricketer Mitchell Marsh with both legs resting on top of the World Cup trophy. The photo was initially shared on Instagram by Australian skipper Pat Cummins. From there, it made its way to several social media platforms. The internet called the gesture ‘disrespectful’ and slammed him for it.
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm